ತೆಲಂಗಾಣ: ಸಂಬಂಧಿಕರ ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ ಯುವಕನೊಬ್ಬ ಹೃದಯಾಘಾತಗೊಂಡು ಕೊನೆಯುಸಿರೆಳೆದ ಘಟನೆ ಶನಿವಾರ ನಡೆದಿದೆ.
ಮಹಾರಾಷ್ಟ್ರ ಮೂಲದ ಮುತ್ಯಂ (19) ಮೃತ ದುರ್ದೈವಿ.
ಶನಿವಾರ ರಾತ್ರಿ ಹೈದರಾಬಾದ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಮುತ್ಯಂ ಅವರು ಸಂಬಂಧಿಕರ ವಿವಾಹ ಆರತಕ್ಷತೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆ ಸಂಭವಿಸಿದ ಕೂಡಲೇ ಯುವಕನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಯುವಕ ಕೊನೆಯುಸಿರೆಳೆದಿದ್ದ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮದುವೆ ಮನೆಯಲ್ಲಿ ಯುವಕ ನೃತ್ಯ ಮಾಡುವ ವಿಡಿಯೋ ಯುವಕನ ಗೆಳೆಯರು ಚಿತ್ರೀಕರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Related Articles
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ನಾಲ್ಕು ದಿನಗಳಲ್ಲಿ ತೆಲಂಗಾಣದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.
ಇದನ್ನೂ ಓದಿ: ಹುಣಸೂರು: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕುರಿಯನ್ನೇ ತಿಂದು ಹಾಕಿದ ಚಿರತೆ