Advertisement

19032 ಹೊಸ ಮತದಾರರ ನೋಂದಣಿ: ಡಾ|ರಾಗಪ್ರಿಯ

05:37 PM Feb 03, 2021 | Team Udayavani |

ಯಾದಗಿರಿ: ಕಳೆದ ವರ್ಷದ ಅಂತಿಮ ಮತದಾರರ ಪಟ್ಟಿಯಲ್ಲಿ 9,93,745 ಮತದಾರರು ನೋಂದಾಯಿಸಿಕೊಂಡಿದ್ದರೆ ಈ ವರ್ಷದ ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 10,12,777 ಮತದಾರರಿದ್ದು ಈ ಬಾರಿ 19032 ಮಂದಿ ಮತದಾರರು ತಮ್ಮ ಹೆಸರನ್ನು ಹೊಸದಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು
ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯನ್ನು ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ವಿತರಿಸಿ ಮಾತನಾಡಿದರು. ಕರಡು ಮತದಾರರ ಪಟ್ಟಿ ಕೂಲಂಕಷವಾಗಿ ಪರಿಶೀಲಿಸಿ ಮೃತಪಟ್ಟವರ ಹೆಸರು ತೆಗೆದುಹಾಕಲಾಗಿದೆ. ಪಟ್ಟಿಯಲ್ಲಿ ಲೋಪದೋಷಗಳಿಗೆ ಆಸ್ಪದ ಕೊಡದಂತೆ ತಯಾರಿಸಲಾಗಿದೆ. ಬೂತ್‌ ಮಟ್ಟದ ಅಧಿಕಾರಿಗಳ ಸಹಕಾರದಿಂದ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದರು.

ಅಂತಿಮ ಮತದಾರರ ಪಟ್ಟಿಯನ್ನು ((//ceokarnataka,kar,nic,in) ಹಾಗೂ ಜಿಲ್ಲೆಯ (yadgir.nic.in)ಅಂತರ್ಜಾಲದಲ್ಲಿಯು ಅಪ್‌ಲೋಡ್‌ ಮಾಡಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರು ಪರಿಶೀಲಿಸಬಹುದು ಎಂದರು.

ಅಂತಿಮ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು, ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬಂಧಿಸಿದಂತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಸ್ಥಳಾಂತರ ಹೊಂದಿದ್ದಲ್ಲಿ ಅಥವಾ ಮೃತಪಟ್ಟಿದ್ದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಅವರುಗಳ ಹೆಸರು ತೆಗೆದು ಹಾಕಲು ನಮೂನೆ-7ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದು ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ತಿಳಿಸಿದರು. ಈ ವೇ ಳೆ ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ್‌, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ್‌ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next