Advertisement
ಆದರೆ ಕೋವಿಡ್ 19 ಸೋಂಕಿನ ಆರ್ಭಟ ಮಾತ್ರ ರಾಜ್ಯದಲ್ಲಿ ಡೌನ್ ಆಗಿಲ್ಲ. ಬದಲಾಗಿ ಕಳೆದ ಕೆಲವು ದಿನಗಳಲ್ಲಿ ವರದಿಯಾಗುತ್ತಿರುವುದಕ್ಕಿಂತ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಇಂದು ವರದಿಯಾಗಿದೆ.
Related Articles
Advertisement
ಇದನ್ನೂ ಓದಿ: ಮಂಗಳೂರಿನ ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೋವಿಡ್ ಸೋಂಕು ದೃಢ
ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 23474 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 9847 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತು ಸಾವಿರದ ಗಡಿ ದಾಟಿದ್ದು 13250 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 373 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 243 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಕೋವಿಡ್ 19 ಸೋಂಕು ದೃಢ, ಯುವಕ ಪರಾರಿ ; ಹಾವೇರಿಯಲ್ಲೊಂದು ವಿಲಕ್ಷಣ ಘಟನೆ!
ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 1235 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ – 147, ಬಳ್ಳಾರಿ – 90, ವಿಜಯಪುರ – 51, ಕಲಬುರಗಿ – 49, ಉಡುಪಿ – 45, ಧಾರವಾಡ – 38, ಬೀದರ್ – 29, ಮೈಸೂರು – 25, ಕೊಪ್ಪಳ – 22, ಉತ್ತರ ಕನ್ನಡ – 21, ಚಾಮರಾಜನಗರ – 19, ಹಾವೇರಿ – 15, ಹಾಸನ – 14, ಚಿಕ್ಕಬಳ್ಳಾಪುರ – 13, ತುಮಕೂರು – 13, ಕೋಲಾರ – 13, ಬೆಳಗಾವಿ – 11, ದಾವಣಗೆರೆ – 11, ರಾಯಚೂರು – 10 ಹಾಗೂ ಮಂಡ್ಯ – 10 ಸೇರಿದಂತೆ ರಾಜ್ಯದ ಒಟ್ಟು 21 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 9580ಕ್ಕೆ ಏರಿಕೆಯಾಗಿದ್ದು, 1267 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 8167 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 145 ಸಾವುಗಳು ಸಂಭವಿಸಿದೆ.
ಇದನ್ನೂ ಓದಿ: ಪರಿಸ್ಥಿತಿ ನಿಯಂತ್ರಣದಲ್ಲಿದೆ, ಭಯ ಬೇಡ : ಸಚಿವ ಸುಧಾಕರ್ಇನ್ನುಳಿದಂತೆ ಕಲಬುರಗಿಯಲ್ಲಿ ಒಟ್ಟು 1646 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1241 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 378 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 27 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೋಟದಲ್ಲಿ ಹೋಟೆಲ್ ಸಿಬಂದಿಗಳು ಸೇರಿ ಮತ್ತೆ 9ಮಂದಿಗೆ ಕೋವಿಡ್ ಪಾಸಿಟಿವ್
ಇನ್ನು ಉಡುಪಿ ಜಿಲ್ಲೆಯಲ್ಲಿ 1321 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1125 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 193 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 3 ಸಾವುಗಳು ಸಂಭವಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1234 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು ಇವರಲ್ಲಿ 549 ಸೋಂಕಿತರು ಗುಣಮುಖರಾಗಿದ್ದಾರೆ. 662 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 21 ಸಾವು ಸಂಭವಿಸಿದೆ. ಇದನ್ನೂ ಓದಿ: ಕೋವಿಡ್ ರೋಗಿಗಳ ಚಿಕಿತ್ಸೆಗೆ ನಿರಾಕರಿಸಿದರೆ ಕ್ರಿಮಿನಲ್ ಕೇಸ್ : ಸಚಿವ ಸುಧಾಕರ್ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1244 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 552 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 657 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 35 ಸಾವು ಸಂಭವಿಸಿದೆ. ಯಾದಗಿರಿ ಜಿಲ್ಲೆಯಲ್ಲಿ 971 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 867 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 103 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ. ಇಂದು ರಾಜ್ಯದಲ್ಲಿ ಒಟ್ಟು 16899 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 14649 ವರದಿಗಳು ನೆಗೆಟಿವ್ ಬಂದಿದೆ ಮತ್ತು 1925 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 706425 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 665525 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 23474 ವರದಿಗಳು ಪಾಸಿಟಿವ್ ಆಗಿವೆ.