Advertisement

ಪ್ರವಾಹ ಸಂತ್ರಸ್ತರ ನೆರವಿಗೆ 195 ಕೋಟಿ ರೂ. ಬಿಡುಗಡೆ

11:38 AM Aug 20, 2019 | sudhir |

ಬೆಂಗಳೂರು : ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ ಬರೆ ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

Advertisement

ರಾಜ್ಯದಲ್ಲಿ ಪ್ರವಾಹ ಪೀಡಿತ ತಾಲ್ಲೂಕುಗಳಲ್ಲಿ ಬಾಧಿತ ಸಂತ್ರಸ್ತರಿಗೆ ಬಟ್ಟೆ ಬರೆ ಹಾಗೂ ದಿನ ಬಳಕೆಯ ವಸ್ತುಗಳಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ಗಳಂತೆ ವಿತರಿಸಲು, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನು ನಿರ್ವಹಿಸಲು ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು 115 ಕೋಟಿ ರೂ. ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕೋಟಿ ನೆರವು ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ನೆರೆಪೀಡಿತ ಪ್ರದೇಶಗಳಿಗೆ 25 ಕೋಟಿ ಮೊತ್ತವನ್ನು ಘೋಷಿಸಿದ್ದು ಇದರಂತೆ ಇಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿಧಾನಸೌಧದಲ್ಲಿ ಪರಿಹಾರ ಮೊತ್ತವನ್ನು ಹಸ್ತಾಂತರಿಸಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next