Advertisement

19ರಿಂದ ಪಲ್ಸ್‌ ಪೋಲಿಯೋ ಅಭಿಯಾನ

07:15 PM Jan 15, 2020 | Naveen |

ಬಳ್ಳಾರಿ: ಜಿಲ್ಲೆಯಲ್ಲಿ ಜ.19ರಿಂದ 22ರವರೆಗೆ ಮೊದಲ ಸುತ್ತಿನ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು, ಎಲ್ಲರು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಎಲ್ಲ ಬೂತ್‌ಗಳಲ್ಲಿ ಜನಪ್ರತಿನಿ ಧಿಗಳ ಮೂಲಕ ಉದ್ಘಾಟಿಸಬೇಕು. ಈ ಅಭಿಯಾನದ ಯಶಸ್ವಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಅನಿಲಕುಮಾರ್‌ ಹೇಳಿದರು.

Advertisement

ನಗರದ ತಾಪಂ ಸಭಾಂಗಣದಲ್ಲಿ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನಕ್ಕೆ
ಸಂಬಂ ಧಿಸಿದಂತೆ ಮಂಗಳವಾರ ಏರ್ಪಡಿಸಿದ್ದ ಟಾಸ್ಕ್ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿ ಶಾಸಕ, ಸಂಸದರ ಮೂಲಕ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತಿ ಸದಸ್ಯರ ಮುಖಾಂತರ ಅದ್ಧೂರಿಯಾಗಿ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಬೇಕು. ಎಲ್ಲಾ ಬೂತ್‌ಗಳ ಉದ್ಘಾಟನೆಯನ್ನು ಅಲ್ಲಿನ ಜನಪ್ರತಿನಿಧಿಗಳ ಮೂಲಕ ಅದ್ಧೂರಿಯಾಗಿ ನೆರವೇರಿಸಿ ನಾಲ್ಕು ದಿನಗಳ ಕಾಲ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

2011ರ ನಂತರ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ವಲಸೆ ಬಂದ ಮಕ್ಕಳಲ್ಲಿ ಮಾತ್ರ ಕೆಲ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಲಸಿಕಾ ಕಾರ್ಯಕ್ರಮದ ತಯಾರಿ ಮಾಡಿಕೊಂಡಿದ್ದು, ಒಟ್ಟಾರೆಯಾಗಿ 19 ತಂಡಗಳು ಕಾರ್ಯನಿರ್ವಹಿಸಲಿವೆ. ಅದೇ ರೀತಿ ಜಿಲ್ಲೆಯ ಪ್ರತಿ ತಾಲೂಕಿನ ಆರೋಗ್ಯಾಧಿಕಾರಿಗಳಿಗೆ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಬೇಕಾದ
ಸೌಲಭ್ಯಗಳ ಕುರಿತಾದ ಮಾಹಿತಿ ಹಾಗೂ ಸಲಕರಣೆಗಳ ಕುರಿತಾದ ವಿಷಯಗಳನ್ನು ಪ್ರಸ್ತಾಪ ಮಾಡಿದರು. ಸಭೆಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಬೇಕಾಗುವ ವಿವಿಧ ಇಲಾಖೆಗಳ ಸಹಕಾರ ವಿವರಿಸಿದರು.

ಮೊದಲಿಗೆ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಪ್ರಕಟಣೆಯ ಪೋಸ್ಟರ್‌
ಮತ್ತು ಪ್ರಚಾರದ ಧ್ವನಿ ಮುದ್ರಿಕೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಜಿಪಂ ಉಪ ಕಾರ್ಯದರ್ಶಿ ಶರಣಪ್ಪ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿ ಕಾರಿ ಜನಾರ್ದನ, ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್‌ ದಾಸಪ್ಪ, ಕಾರ್ಯಕ್ರಮ ಸಂಯೋಜನಾ ಧಿಕಾರಿ ರಾಘವೇಂದ್ರ ಸೇರಿದಂತೆ ತಾಲೂಕು ವೈದ್ಯಾ ಧಿಕಾರಿಗಳು, ಸಾರಿಗೆ, ಶಿಕ್ಷಣ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next