ಕಾನ್ಪುರ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಬಲಗೈ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್, ಶ್ರೇಯಸ್ ಅಯ್ಯರ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ ಎಂದು ಭಾರತ ತಂಡದ ನಾಯಕ ಅಜಿಂಕ್ಯ ರಹಾನೆ ಬುಧವಾರ ಖಚಿತಪಡಿಸಿದ್ದಾರೆ.
ನವೆಂಬರ್ 25, ಗುರುವಾರದಿಂದ ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಆರಂಭಾವಾಗಲಿದೆ.
ಪಂದ್ಯದ ಪೂರ್ವ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಟೆಸ್ಟ್ ನಾಯಕ ಅಜಿಂಕ್ಯ ರಹಾನೆ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ.
ಏಕದಿನ ಮತ್ತು ಟಿ 20 ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಅಯ್ಯರ್ ಟೆಸ್ಟ್ ನಲ್ಲೂ ಮಿಂಚಲಿದ್ದಾರೆ ಎಂದು ರಹಾನೆ ಹೇಳಿದ್ದಾರೆ.
ಭಾರತವು ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಿದ್ದು, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಯಾವ ಸಂಯೋಜನೆಯೊಂದಿಗೆ ಆಡಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮತ್ತು ರವೀಂದ್ರ ಜಡೇಜಾ ಆಯ್ಕೆಗೆ ಲಭ್ಯವಿರುವುದರಿಂದ ಸ್ಪಿನ್ ವಿಭಾಗವನ್ನು ಚೆನ್ನಾಗಿ ಬಳಸಿಕೊಳ್ಳಬಹುದಾಗಿದೆ.