Advertisement

Ganesha Festival: ಒಂದೇ ದಿನ 2.17 ಲಕ್ಷ ಗಣೇಶನ ವಿಸರ್ಜನೆ

09:57 AM Sep 09, 2024 | Team Udayavani |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಶನಿವಾರ 2,17,006 ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ/ಮೊಬೈಲ್‌ ಟ್ಯಾಂಕರ್‌, ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ವಿಸರ್ಜನೆ ಕಾರ್ಯ ನಡೆಯಿತು. ಭಾನುವಾರ ಕೂಡ ಪಾಲಿಕೆ ಎಂಟೂ ವಲಯಗಳಲ್ಲಿ ಈ ಪ್ರಕ್ರಿಯೆ ಸಾಗಿತು ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಯಡಿಯೂರು ಕೆರೆ ಕೊಳದಲ್ಲಿ ಪೇಪರ್‌ ಗಣೇಶ ವಿಸರ್ಜನೆ: ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿ ಯಲ್ಲಿರುವ ಯಡಿಯೂರು ಕೆರೆಯ ವಿಸರ್ಜನಾ ಕೊಳದಲ್ಲಿ ಶನಿವಾರ 78,000ಕ್ಕೂ ಹೆಚ್ಚು ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಅವುಗಳ ಪೈಕಿ -76000 ಮಣ್ಣಿನ ಮೂರ್ತಿಗಳು, 1,800 ಪೇವರ್‌ ಮೂರ್ತಿಗಳು, 200 ಪಿಒಪಿ ಮೂರ್ತಿಗಳು ಸೇರಿವೆ ಎಂದು ಪಾಲಿಕೆ ಮಾಜಿ ಸದಸ್ಯ ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ.

ಯಡಿಯೂರು ಕೆರೆಯ ವಿಸರ್ಜನಾ ಕೊಳದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಣ್ಣಿನ ಗಣೇಶ ಮೂರ್ತಿ ವಿಸರ್ಜಿಸಿದರು. ಸೆ.17ರ ವರೆಗೆ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದ್ದು, 80 ಮಂದಿ ನುರಿತ ಈಜು ಪಟುಗಳನ್ನು ವಿಸರ್ಜನಾ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ. ಭದ್ರತೆಯ ದೃಷ್ಟಿಯಿಂದ 14 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಮತ್ತು ಇಬ್ಬರು ವೈದ್ಯರನ್ನು ನಿಯೋಜಿಸಲಾಗಿದೆ.

ಬಿಬಿಎಂಪಿ ನಿರ್ಮಿಸಿರುವ ವಿಸರ್ಜನಾ ಕೊಳಗಳ ಪೈಕಿ, ಅತಿ ಹೆಚ್ಚು ಗಣೇಶ ಮೂರ್ತಿಗಳನ್ನು ಯಡಿಯೂರು ವಿಸರ್ಜನಾ ಕೊಳದಲ್ಲಿ ವಿಸರ್ಜನೆಯಾಗುತ್ತದೆ. ಕಳೆದ ವರ್ಷ 1,75,000ಕ್ಕೂ ಹೆಚ್ಚು ಮೂರ್ತಿಗಳನ್ನು ಈ ಕೊಳದಲ್ಲಿ ವಿಸರ್ಜನೆ ಮಾಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next