ವಿಧಾನಪರಿಷತ್ತು: ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ 2019-20 ಮತ್ತು 2020-21ನೇ ಆರ್ಥಿಕ ವರ್ಷದಲ್ಲಿ ಪ್ರಗತಿಯಲ್ಲಿದ್ದ ಮನೆಗಳ ಪೈಕಿ 2.53 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಗತಿಗನುಗುಣವಾಗಿ ಅರ್ಹ ಫಲಾನುಭವಿಗಳಿಗೆ ಈವರೆಗೆ 4,433 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
ವಿವಿಧ ವಸತಿ ಯೋಜನೆಗಳಡಿ ಮಂಜೂರಾದ ಮನೆಗಳನ್ನು ಇಂದಿರಾ ಆ್ಯಪ್ ಮುಖಾಂತರ ಜಿಪಿಎಸ್ ಮಾಡಲಾದ ಮನೆಗಳ ಭೌತಿಕ ಪ್ರಗತಿಗಣುವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಪ್ರಗತಿಯಲ್ಲಿರುವ ಮನೆಗಳಲ್ಲಿ ಕೆಲವು ಅನರ್ಹ ಫಲಾನುಭವಿಗಳ ಆಯ್ಕೆ ಕಂಡು ಬಂದಿರುವುದರಿಂದ ಅನುದಾನ ದುರ್ಬಳಕೆಯನ್ನು ತಡೆ ಹಿಡಿಯಲು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ :ನದಿ ತೀರದ ಹಂಪಿ ಸ್ಮಾರಕಗಳು ಜಲಾವೃತ
2018-19ರಿಂದ 2020-21ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಗಳಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಒಟ್ಟು 10,361 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಾರಂಭಿಕ ಶಿಲ್ಕು 976 ಕೋಟಿ ರೂ. ಸೇರಿದಂತೆ 9,734 ಕೋಟಿಗಳನ್ನು ಬಿಎಲ್‌ಸಿ ಮತ್ತು ಎಎಚ್‌ಪಿ ಯೋಜನೆಗಳಡಿ ಖರ್ಚು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.