ಯಾದಗಿರಿ: ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ಕೃಷ್ಣ ನದಿಗೆ ನೀರು ಹರಿಸಲಾಗಿದೆ. ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಸೇತುವೆ ಜಲಾವೃತಗೊಂಡಿರುವುದು. ಅಂತಾರಾಜ್ಯ ಸಂಪರ್ಕ ಕಡಿತವಾಗಿದೆ.
ಕೃಷ್ಣೆಯ ಒಡಲಿಗೆ 2.60 ಲಕ್ಷ ಕ್ಯೂಸೆಕ್ ನೀರು ಹರಿಸಿದ ಕಾರಣ ಸೇತುವೆ ಜಲಾವೃತ ಪ್ರಯಾಣಿಕರ ಪರದಾಟ.
ಸೇತುವೆ ಜಲಾವೃತವಾಗುವ ಹಿನ್ನೆಲೆಯಲ್ಲಿ ಕಳೆದೊಂದು ವಾರದ ಹಿಂದೆಯೇ ಭಾರಿ ಗಾತ್ರದ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.
ನದಿಗೆ 3 ಲಕ್ಷ ಕ್ಯೂಸೆಕ್ ನೀರು ಹರಿಸಿದ್ದಲ್ಲಿ ಹಲವು ಗ್ರಾಮಗಳಿಗೆ ನೀರು ನುಗ್ಗುವ ಆತಂಕ ಇದೀಗ ಗ್ರಾಮಸ್ಥರಲ್ಲಿ ಮನೆ ಮಾಡಿದೆ.
ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು 25 ಗೇಟ್ ಗಳ ಮೂಲಕ ನೀರು ಹರಿಸಲಾಗಿದೆ. ಜಲಾಶಯದ ಗರಿಷ್ಠ 33.313 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು ಸದ್ಯ 26.23ಟಿಎಂಸಿ ನೀರಿದೆ.