ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.82ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಮಂಗಳವಾರಕ್ಕಿಂತ ಶೇ.18ರಷ್ಟು ಪ್ರಕರಣ ಹೆಚ್ಚಳವಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಜನವರಿ 19) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ರಿಯಲ್‌ಮಿ 9ಐ ಬಿಡುಗಡೆ : ಎರಡು ಬಣ್ಣಗಳಲ್ಲಿ ಲಭ್ಯ, ಜ.25ರಿಂದ ಮಾರುಕಟ್ಟೆಗೆ
ದೇಶದಲ್ಲಿನ ಪಾಸಿಟಿವಿಟಿ ದರ ಶೇ.14.43ರಿಂದ ಶೇ.15.13ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 8,961ಕ್ಕೆ ಹೆಚ್ಚಳವಾಗಿದೆ ಎಂದರು. ನಿನ್ನೆಗಿಂತ ಶೇ.0.79ರಷ್ಟು ಒಮಿಕ್ರಾನ್ ಪ್ರಕರಣ ಏರಿಕೆಯಾಗಿದೆ.
24ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ನಿಂದ 441 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಕೋವಿಡ್ ಸೋಂಕಿನಿಂದಾಗಿ 310 ಮಂದಿ ಸಾವನ್ನಪ್ಪಿದ್ದರು. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 18.31ಲಕ್ಷಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ಹೇಳಿದೆ.
ಒಂದೇ ದಿನದಲ್ಲಿ ದೇಶದಲ್ಲಿ 1.88 ಲಕ್ಷ ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ.93.88ರಷ್ಟಿದೆ ಎಂದು ವರದಿ ತಿಳಿಸಿದೆ.