Advertisement

ಅಕ್ರಮ ಗಾಂಜಾ ಮಾರಾಟ : ಇಬ್ಬರ ಬಂಧನ, 1ಕೆ.ಜಿ 50.ಗ್ರಾಂ ಗಾಂಜಾ ವಶ

06:11 PM Aug 17, 2020 | sudhir |

ಕುಂದಾಪುರ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ 1ಕೆ.ಜಿ 50 ಗ್ರಾಂ ಗಾಂಜಾ ಹಾಗೂ ಎರಡು ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಬಂಧಿತರನ್ನು ಕುಂದಾಪುರ ಕವ್ರಾಡಿ ಮಸೀದಿ ಬಳಿಯ ನಿವಾಸಿ ಅಬ್ದುಲ್ ಅಜೀಜ್ (36) ಹಾಗೂ ಕವ್ರಾಡಿ ಜನತಾ ಕಾಲೋನಿಯ ಸಬೀಬ್(25) ಎನ್ನಲಾಗಿದೆ.

ಕುಂದಾಪುರ ತಾಲೂಕಿನ ಬಸ್ರೂರು ಬಳಿಯ ಪಾನದ ಕಟ್ಟೆ ಎಂಬಲ್ಲಿ ಇರುವ ಈಟ್ ರಿಪೀಟ್ ಎಂಬ ಫಾಸ್ಟ್ ಫುಡ್ ಅಂಗಡಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಡುಪಿ ಡಿಸಿಐಬಿ ಪೊಲೀಸ್ ಇನ್ಸ್ ಪೆಕ್ಟರ್ ಮಂಜಪ್ಪ ಡಿಆರ್ ಅವರ ನೇತೃತ್ವದ ತಂಡ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟಿದ್ದ 1ಕೆ.ಜಿ 50 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next