Advertisement

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

08:07 PM Apr 26, 2024 | Team Udayavani |

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸತತ ಎರಡನೇ ದಿನ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಶುಕ್ರವಾರ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆಯಲ್ಲಿ ಸೇನಾ ಸಿಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಎನ್‌ಕೌಂಟರ್ ಪ್ರಾರಂಭವಾಗಿದ್ದು, ರಾತ್ರಿಯ ವಿರಾಮದ ನಂತರ, ಶುಕ್ರವಾರ ಬೆಳಗ್ಗೆ ಗುಂಡಿನ ಚಕಮಕಿ ಮತ್ತೆ ಆರಂಭವಾಗಿದೆ.

ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಎನ್‌ಕೌಂಟರ್ ನಡೆದ ಸ್ಥಳದ ಸಮೀಪ ನಾಗರಿಕರೊಬ್ಬರು ಗಾಯಗೊಂಡಿದ್ದರು.

ಪ್ರದೇಶದಲ್ಲಿ ಇನ್ನೂ ಕೆಲ ಉಗ್ರರಿರುವ ಸಾಧ್ಯತೆ ಇದ್ದು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next