ಶ್ರೀನಗರ: ಸೇಬು ತೋಟದಲ್ಲಿ ಕಾಶ್ಮೀರಿ ಪಂಡಿತರೊಬ್ಬರನ್ನು ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಮಂಗಳವಾರ (ಆಗಸ್ಟ್ 16) ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಪಂಡಿತರ ಸಹೋದರ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ದೇಶಭಕ್ತಿ ಕಿಚ್ಚು ಹೊತ್ತಿಸಿದ 9 ಕಿಮೀ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ
ಮೂರು ತಿಂಗಳ ಹಿಂದೆ ಉಗ್ರರು ಬುಡ್ಗಾಮ್ ನ ಸರ್ಕಾರಿ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ನೌಕರರೊಬ್ಬರನ್ನು ಹತ್ಯೆಗೈದಿದ್ದು, ಈ ಪ್ರಕರಣದ ನಂತರ ಕಾಶ್ಮೀರಿ ಪಂಡಿತ್ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತ್ತು.
ಇಂದು ಶೋಪಿಯಾನ್ ನ ಛೋಟಿಪೋರಾ ಪ್ರದೇಶದಲ್ಲಿ ಸೇಬು ತೋಟದಲ್ಲಿದ್ದ ಕಾಶ್ಮೀರಿ ಪಂಡಿತರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಘಟನೆಯಲ್ಲಿ ಸಹೋದರ ಗಾಯಗೊಂಡಿರುವುದಾಗಿ ವರದಿ ಹೇಳಿದೆ.
ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಸೇನಾ ಪಡೆ ಸ್ಥಳವನ್ನು ಸುತ್ತುವರಿದಿದ್ದು ಶೋಧ ಕಾರ್ಯ ನಡೆಸುತ್ತಿರುವುದಾಗಿ ಭದ್ರತಾ ಪಡೆ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.