Advertisement

ಗುಂಡಿನ ದಾಳಿ: ಇಬ್ಬರು ಬಿಎಸ್‌ಎಫ್ ಯೋಧರು ಹುತಾತ್ಮ

09:37 PM May 20, 2020 | Sriram |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೆರ್‌ಬಾಲ್‌ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್‌ಎಫ್ ಯೋಧರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪಂಚಾ ಪ್ರದೇಶದ ಪಿಕೆಟ್‌ನಲ್ಲಿ ಈ ಘಟನೆ ನಡೆದಿದೆ. ಬೈಕ್‌ ಏರಿ ಬಂದ ಉಗ್ರರು ಯೋಧರ ಕಡೆ ಗುಂಡು ಹಾರಿಸಿದ್ದಾರೆ. ಆ ವೇಳೆ ಒಬ್ಬ ಯೋಧ ಸ್ಥಳದಲ್ಲೇ ಮೃತಪಟ್ಟರು. ಇತರ ಮೂವರು ಗಾಯಗೊಂಡರು ಅವರಲ್ಲಿ ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟರು ಎಂದು ಅವರು ತಿಳಿಸಿದ್ದಾರೆ. ದಾಳಿಕೋರರನ್ನು ಹಿಡಿಯಲು ಬಲೆ ಬೀಸಲಾಗಿದೆ ಎಂದು ಅವರು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next