Advertisement

ರಾಜಸ್ಥಾನ್ ಗೆಹ್ಲೋಟ್ ಸರ್ಕಾರದ ಬೆಂಬಲ ವಾಪಸ್ ಪಡೆದ ಇಬ್ಬರು ಬಿಟಿಪಿ ಶಾಸಕರು

03:07 PM Dec 11, 2020 | Nagendra Trasi |

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದ ಭಾರತೀಯ ಬುಡಕಟ್ಟು ಪಕ್ಷ(ಬಿಟಿಪಿ)ದ ಇಬ್ಬರು ಶಾಸಕರು ಶುಕ್ರವಾರ (ಡಿಸೆಂಬರ್ 11, 2020) ಬೆಂಬಲ ವಾಪಸ್ ಪಡೆದಿದ್ದಾರೆ.

Advertisement

ಇತ್ತೀಚೆಗಷ್ಟೇ ನಡೆದ ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಿದ ಬೆನ್ನಲ್ಲೇ ರಾಜಸ್ಥಾನ್ ರಾಜಕೀಯದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ವರದಿ ತಿಳಿಸಿದೆ. ಪಂಚಾಯತ್ ಚುನಾವಣೆಯಲ್ಲಿ ತಮ್ಮನ್ನು ಕಾಂಗ್ರೆಸ್ ಬೆಂಬಲಿಸಿಲ್ಲ ಎಂದು ಬಿಟಿಪಿಯ ಇಬ್ಬರು ಶಾಸಕರು ಆರೋಪಿಸಿದ್ದಾರೆ.

ಗುರುವಾರ 20 ಜಿಲ್ಲಾ ಪರಿಷತ್ ಮತ್ತು 221 ಗ್ರಾಮ ಪಂಚಾಯ್ತಿಯ ಪ್ರಮುಖ್ ಮತ್ತು ಪ್ರಧಾನ್ ಹುದ್ದೆಗಾಗಿ ಚುನಾವಣೆ ನಡೆದಿತ್ತು. ಇದರಲ್ಲಿ 12 ಬಿಜೆಪಿ, ಐದು ಕಾಂಗ್ರೆಸ್ ಮತ್ತು ಮೂರು ಪಕ್ಷೇತರ ಅಭ್ಯರ್ಥಿಗಳು 20 ಜಿಲ್ಲಾ ಪರಿಷತ್ ನ ಪ್ರಮುಖ್ ಹುದ್ದೆಗೆ ಆಯ್ಕೆಯಾಗಿದ್ದರು ಎಂದು ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಇದನ್ನೂ ಓದಿ:ಮಂಗಳೂರು- ಮೈಸೂರು ವಿಮಾನಯಾನ ಆರಂಭ: ಮಂಗಳೂರಿಗೆ ಬಂದಿಳಿದ ಮೊದಲ ವಿಮಾನ

ರಾಜಸ್ಥಾನ್ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಬಂಡಾಯ ಸಾರಿ, ರಾಜಕೀಯ ಬಿಕ್ಕಟ್ಟು ಉದ್ಭವಿಸಿದ್ದ ಸಂದರ್ಭದಲ್ಲಿ ಈ ಇಬ್ಬರು ಶಾಸಕರು ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು.

Advertisement

ಪೈಲಟ್ ಹಾಗೂ ಬೆಂಬಲಿಗರು ಬಂಡಾಯ ಎದ್ದ ಪರಿಣಾಮ ರಾಜಸ್ಥಾನದಲ್ಲಿ ತಿಂಗಳು ಕಾಲ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ನಂತರ ನಡೆದ ಬಹುಮತ ಸಾಬೀತು ಸಂದರ್ಭದಲ್ಲಿ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಧ್ವನಿ ಮತದ ಮೂಲಕ ಬಹುಮತ ಸಾಬೀತುಪಡಿಸಿತ್ತು. 2018ರಿಂದ ಬಿಟಿಪಿಎ ಇಬ್ಬರು ಶಾಸಕರು ಗೆಹ್ಲೋಟ್ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 105, ಬಿಜೆಪಿ 77, ಆರ್ ಎಲ್ ಪಿ 03, ಬಿಟಿಪಿ 02, ಪಕ್ಷೇತರ 01 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next