Advertisement

ಲಕ್ಷ್ಮೇಶ್ವರದಲ್ಲಿ ಮತ್ತೆರೆಡು ಪ್ರಕರಣ

04:27 PM Jul 04, 2020 | Suhan S |

ಲಕ್ಷ್ಮೇಶ್ವರ: ಪಟ್ಟಣದ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮತ್ತು ತಾಲೂಕಿನ ಗೊಜನೂರ ಗ್ರಾಮದ ಗರ್ಭಿಣಿ ಸೇರಿ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಜೂ. 27ರಂದು 2 ಪ್ರಕರಣ ದೃಢಪಟ್ಟ ನಂತರ ಶುಕ್ರವಾರ ಮತ್ತೆರೆಡು ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡಿದೆ.

Advertisement

ಖಾಸಗಿ ಆಸ್ಪತ್ರೆ ಸಿಬ್ಬಂದಿಯಾಗಿರುವ ಮಹಿಳೆ ಪಟ್ಟಣದ ಹೊಸ ಬಸ್‌ನಿಲ್ದಾಣದ ಹತ್ತಿರದ ಬಸವೇಶ್ವರ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಶುಕ್ರವಾರ ತಾಲೂಕಾಡಳಿತದ ಸೂಚನೆಯಂತೆ ಪುರಸಭೆ ಸಿಬ್ಬಂದಿ ಹೈಡ್ರೋಕ್ಲೋರೈಡ್‌ ದ್ರಾವಣ ಸಿಂಪಡಿಸಿ 100 ಮೀಟರ್‌ ಸುತ್ತಲಿನ ಪ್ರದೇಶ ಸೀಲ್‌ಡೌನ್‌ ಮಾಡಿದ್ದಾರೆ. ಗೊಜನೂರ ಗ್ರಾಮದ ಗರ್ಭಿಣಿಗೂ ಕೋವಿಡ್ ಸೋಂಕು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದು, ಗರ್ಭಿಣಿ ವಾಸಿಸುತ್ತಿದ್ದ ಪ್ರದೇಶವನ್ನು ಗ್ರಾಪಂನವರು ಸೀಲ್‌ಡೌನ್‌ ಮಾಡಿದ್ದಾರೆ.

ತಹಶೀಲ್ದಾರ್‌ ಭ್ರಮರಾಂಬ ಗುಬ್ಬಿಶೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ, ಮನೆಯಿಂದ ಹೊರಬರದೇ ಜಾಗರೂಕತೆಯಿಂದ ವರ್ತಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್‌ ಮಾಡಿ ಅವರ ಆರೋಗ್ಯ ಪರೀಕ್ಷೆ ಮಾಡಲಾಗುವುದು. ಆರೋಗ್ಯದಲ್ಲಿ ವ್ಯತ್ಯಾಸವಾದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next