Advertisement

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

09:33 AM Oct 07, 2024 | Team Udayavani |

ಪಾಕಿಸ್ತಾನ: ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದು ಮತ್ತು 10 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

Advertisement

ಭಾನುವಾರ ತಡರಾತ್ರಿ ಸುಮಾರು ಹನ್ನೊಂದು ಗಂಟೆಯ ಸುಮಾರಿಗೆ ಏರ್ ಪೋರ್ಟ್ ಬಳಿ ಟ್ಯಾಂಕರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿರುವುದಾಗಿ ಪಾಕಿಸ್ತಾನದಲ್ಲಿರುವ ಚೀನಾ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದ್ದು ಪಾಕಿಸ್ತಾನದಲ್ಲಿರುವ ಚೀನಾದ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಪಾಕಿಸ್ತಾನದ ಅಧಿಕಾರಿಗಳಿಗೆ ಒತ್ತಾಯಿಸುತ್ತೇವೆ, ”ಎಂದು ರಾಯಭಾರ ಕಚೇರಿ ಮಾಹಿತಿ ನೀಡಿದೆ.

ನಿಷೇಧಿತ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಕರಾಚಿ ವಿಮಾನ ನಿಲ್ದಾಣದಿಂದ ಆಗಮಿಸುವ “ಚೀನೀ ಇಂಜಿನಿಯರ್‌ಗಳು ಮತ್ತು ಹೂಡಿಕೆದಾರರ ಉನ್ನತ ಮಟ್ಟದ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡ” “ಆತ್ಮಹತ್ಯಾ ಬಾಂಬ್ ದಾಳಿಯ” ಜವಾಬ್ದಾರಿಯನ್ನು ಹೊತ್ತುಕೊಂಡಿದೆ.

ಸ್ಫೋಟದಲ್ಲಿ ಗಾಯಗೊಂಡವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಘಟನೆಯಿಂದ ಏರ್ ಪೋರ್ಟ್ ಮಾರ್ಗದಲ್ಲಿದ್ದ ಕೆಲ ವಾಹನಗಳು ಬೆಂಕಿಗಾಹುತಿಯಾಗಿವೆ.

Advertisement

ಸಿಂಧ್ ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಲಾಂಜಾರ್ ಅವರು ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಬಳಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ, ಜೊತೆಗೆ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಭಾರೀ ಸೇನಾಪಡೆ ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ.

ಈ ವರ್ಷದ ಮಾರ್ಚ್‌ನಲ್ಲಿ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಐವರು ಚೀನಾದ ಪ್ರಜೆಗಳು ಮತ್ತು ಸ್ಥಳೀಯರೊಬ್ಬರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Advertisement

Udayavani is now on Telegram. Click here to join our channel and stay updated with the latest news.

Next