ನವದೆಹಲಿ: ಹಿಮಾಚಲ ಪ್ರದೇಶದ ಕಾಂಗ್ರೆಸ್ ಶಾಸಕರಾದ ಪವನ್ ಕಾಜಲ್ ಮತ್ತು ಲಖ್ವಿಂದರ್ ರಾಣಾ ಅವರು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರ ಸಮ್ಮುಖದಲ್ಲಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಕಾಂಗ್ರೆಸ್‌ನ ಕಾಂಗ್ರಾ ಶಾಸಕ ಪವನ್ ಕಾಜಲ್ ಮತ್ತು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರೂ ಆಗಿರುವ ರಾಣಾ ಅವರು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಜೆಪಿಗೆ ಸೇರ್ಪಡೆಗೊಂಡರು.
ಇಬ್ಬರು ಕಾಂಗ್ರೆಸ್ ನಾಯಕರ ಪಕ್ಷ ಸೇರ್ಪಡೆ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಕೂಡ ಉಪಸ್ಥಿತರಿದ್ದರು.
ಠಾಕೂರ್ ಅವರು, ಹಿಮಾಚಲ ಪ್ರದೇಶದಲ್ಲಿ ಸರ್ಕಾರ ಬದಲಿಸುವ ಪ್ರವೃತ್ತಿಯನ್ನು ಈ ಬಾರಿ ಪಕ್ಷ ಮುರಿದು ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಜಲ್ ಮತ್ತು ರಾಣಾ ಇಬ್ಬರೂ ಪ್ರಧಾನಿ ನರೇಂದ್ರ ಮೋದಿಯವರ “ಸ್ಫೂರ್ತಿದಾಯಕ ನಾಯಕತ್ವ” ದಿಂದ ಪ್ರಭಾವಿತರಾಗಿದ್ದಾರೆ ಮತ್ತು ಬಿಜೆಪಿಯ “ಜನಪರ” ನೀತಿಗಳಿಂದಾಗಿ ಬಿಜೆಪಿಗೆ ಸೇರುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ.