Advertisement
ಸಂಪ್ಯ ಠಾಣೆಯ ಪಿಎಸ್‌ಐ ಶ್ರೀನಾಥ್ ರೆಡ್ಡಿ, ಕಾನ್ಸ್ ಸ್ಟೆಬಲ್ ಹರ್ಷಿತ್ ಅಮಾನತುಗೊಂಡವರು. ಪ್ರಕರಣಕ್ಕೆಸಂಬಂಧಿಸಿ ಪುತ್ತೂರು ಉಪವಿಭಾಗದ ಡಿವೈಎಸ್ಪಿ ವೀರಯ್ಯ ಹಿರೇಮಠ ವಿರುದ್ಧವೂ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ಮೇಲಧಿಕಾರಿ ಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ ತಿಳಿಸಿದ್ದಾರೆ.
Related Articles
Advertisement
ಅಂತಹ ಕಾನೂನುಬಾಹಿರ ಮತ್ತು ಅನಗತ್ಯ ಕ್ರಮಗಳನ್ನು ಸಹಿಸುವುದಿಲ್ಲ ಎಂದಿದ್ದಾರೆ. ಅಮಾನತಿಗೆ ಶಾಸಕರ ಸೂಚನೆ: ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಮತ್ತು ದೌರ್ಜನ್ಯದಲ್ಲಿ ಭಾಗಿಯಾದ ಪೊಲೀಸರನ್ನು ಗುರುವಾರ ಸಂಜೆಯೊಳಗೆ ಅಮಾನತು ಮಾಡಬೇಕು ಎಂದು ಬೆಂಗಳೂರಿನಲ್ಲಿರುವ ಪುತ್ತೂರಿನ ನೂತನ ಶಾಸಕ ಅಶೋಕ್ ಕುಮಾರ್ ರೈ ಪೊಲೀಸ್ ಇಲಾಖೆಗೆ ಸೂಚಿಸಿದ್ದು, ಕೂಡಲೇ ಜಿಲ್ಲಾ ಪೊಲೀಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದರು.
ದಯವಿಟ್ಟು ನಮ್ಮನ್ನು ಕ್ಷಮಿಸಿ: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ. ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್, ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಘಟನೆಗೆ ಸಂಬಂಧಿಸಿದಂತೆ ಪಕ್ಷ ಸೋತಾಗ ಅನಾಥನಾಗುವುದು, ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಟ್ವೀಟಿನಲ್ಲಿ ಬರೆದುಕೊಂಡಿದ್ದಾರೆ.
ಹಲವರ ಭೇಟಿ-ಖಂಡನೆ: ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಸಂಘ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ, ಚಕ್ರವರ್ತಿ ಸೂಲಿಬೆಲೆ, ಬಿಜೆಪಿ ಮುಖಂಡರಾದ ಆಶಾ ತಿಮ್ಮಪ್ಪ ಗೌಡ, ಕಿಶೋರ್ ಬೊಟ್ಯಾಡಿ, ಮುರಳಿಕೃಷ್ಣ ಹಸಂತಡ್ಕ, ಕೃಷ್ಣ ಶೆಟ್ಟಿ ಕಡಬ ಮೊದಲಾದವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರವಾಣಿ ಮೂಲಕ ಯೋಗಕ್ಷೇಮ ವಿಚಾರಿಸಿದ್ದಾರೆ. ಪುತ್ತೂರು ಹಿಂದೂ ಸೇನೆ, ಹಿಂದೂ ಜಾಗರಣ ವೇದಿಕೆ ಘಟನೆಯನ್ನು ಖಂಡಿಸಿದೆ.
ಇಂದು ಪುತ್ತೂರಿಗೆ ಯತ್ನಾಳ್ಹಿಂದೂ ಕಾರ್ಯಕರ್ತರ ಯೋಗಕ್ಷೇಮ ಮತ್ತು ಪ್ರಕರಣದ ಕುರಿತು ಮಾಹಿತಿ ಪಡೆಯಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೇ 19ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲರಿಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದ್ದು ಘಟನೆಯ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಅಡಿಶನಲ್ ಎಸ್‌ಪಿ ನೇತೃತ್ವದಲ್ಲಿ ಇಲಾಖಾ ವಿಚಾರಣೆಗೆ ಆದೇಶಿಸಿ ವಿಚಾರಣೆ ನಡೆಸಿ, ಇಬ್ಬರ ಅಮಾನತು ಮಾಡಲಾಗಿದೆ. ಹಲ್ಲೆಗೊಳಗಾದವರು ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದು ಅದರ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಬಂಟ್ವಾಳ ಸಬ್ ಡಿವಿಜನ್ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲು ಸೂಚಿಸಲಾಗಿದ್ದು ಎಲ್ಲ ಮಾಹಿತಿಯನ್ನು ಇಲಾಖಾ ಶಿಸ್ತು ಪ್ರಾಧಿಕಾರಕ್ಕೆ ಕಳುಹಿಸಿಕೊಡುತ್ತೇವೆ.
● ವಿಕ್ರಮ ಅಮ್ಟೆ, ಪೊಲೀಸ್ ವರಿಷ್ಠಾಧಿಕಾರಿ ದ.ಕ ಸರಕಾರ ಬದಲಾದ ತಕ್ಷಣ ಏನು ಬೇಕಾದರೂ ಮಾಡಬಹುದು ಅನ್ನುವುದಕ್ಕೆ ಈ ಘಟನೆ ಉದಾಹರಣೆ. ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ನೂರಕ್ಕೆ ನೂರು ಕಾಂಗ್ರೆಸ್ ಮಾಡಿದ ಕಿತಾಪತಿ. ನಾವು ಇದನ್ನು ಹೀಗೆ ಬಿಡುವುದಿಲ್ಲ. ಇದರ ಹಿಂದಿನ ಶಕ್ತಿ
ಯಾರೆಂದು ಗೊತ್ತಾಗಬೇಕು. ಸರಕಾರ ಬದಲಾದ ಕೂಡಲೇ ಇಂತಹ ಘಟನೆ ಒಳ್ಳೆಯ ಲಕ್ಷಣ ಅಲ್ಲ.
●ಡಾ| ಪ್ರಭಾಕರ ಭಟ್ ಕಲ್ಲಡ್ಕ,
ಸಂಘ ಪರಿವಾರದ ಮುಖಂಡ