ಪುಂಜಾಲಕಟ್ಟೆ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಗೆ ಎರಡು ಕೋ.ರೂ. ಅನುದಾನ ಮಂಜೂರುಗೊಂಡಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೇಳಿದರು.
ಅವರು ಶುಕ್ರವಾರ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜುಗಳ ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿ, ಶಿಕ್ಷಕರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಜಿ.ಪಂ.ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ.ಸದಸ್ಯೆ ವಸಂತಿ, ಮಡಂತ್ಯಾರು ಗ್ರಾ.ಪಂ. ಸದಸ್ಯರಾದ ಹನೀಫ್ ಮತ್ತು ಸಾರಾ ಸನತ್, ಕಾಲೇಜು ವಿಭಾಗದ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಂಜೀವ ಶೆಟ್ಟಿ ಮುಗೆರೋಡಿ, ಪ್ರೌಢಶಾಲಾ ವಿಭಾಗದ ಉಪಾಧ್ಯಕ್ಷ ಗಿರೀಶ್ ಮೂಲ್ಯ, ಪ್ರಾಥಮಿಕ ಶಾಲಾ ವಿಭಾಗದ ಅಧ್ಯಕ್ಷ ಜಯರಾಮ ಶೆಟ್ಟಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಶಿವಪ್ರಸಾದ ಅಜಿಲ, ಸಹಾಯಕ ಅಭಿಯಂತ ಗುರುಪ್ರಸಾದ್ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲೆ ಪುಷ್ಪಲತಾ ಎಚ್.ಡಿ., ಪ್ರೌಢಶಾಲೆ ಉಪಪ್ರಾಂಶುಪಾಲ ಉದಯ ಕುಮಾರ್ ಬಿ., ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮೋನಪ್ಪ ಕೆ. ಅವರು ಬೇಡಿಕೆಗಳ ಮನವಿ ಸಲ್ಲಿಸಿದರು. ಶಿಕ್ಷಕ ಗೋಪಾಲ ಸ್ವಾಗತಿಸಿ, ಹರಿಪ್ರಸಾದ್ ಆರ್.ವಂದಿಸಿದರು. ಧರಣೇಂದ್ರ ಕೆ. ನಿರೂಪಿಸಿದರು.
ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ :
ಸರಕಾರದ ಹೊಸ ಚಿಂತನೆಯಂತೆ ಕರ್ನಾಟಕ ಪಬ್ಲಿಕ್ ಶಾಲೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡುತ್ತಿದೆ. ಪುಂಜಾಲಕಟ್ಟೆ ಶಾಲೆಯೂ ಅಭಿವೃದ್ಧಿ ಹೊಂದಬೇಕು ಎಂಬುದು ನನ್ನ ಪರಿಕಲ್ಪನೆಯಾಗಿದೆ. ಇದು ಸಾಕಾರಗೊಳ್ಳಲು ಪೋಷಕರು, ಶಿಕ್ಷಕರು, ಜನಪ್ರತಿನಿಧಿಗಳು ಒಂದೇ ಚಿಂತನೆಯಿಂದ ಕಾತರಾಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೇಳಿದರು.