Advertisement

Money seized: ಕಾರಲ್ಲಿ ಸಾಗಿಸುತ್ತಿದ್ದ 2 ಕೋಟಿ ನಗದು ಜಪ್ತಿ; ಪ್ರಕರಣ ದಾಖಲು

10:41 AM Apr 21, 2024 | Team Udayavani |

ಬೆಂಗಳೂರು: ಬಿನ್ನಿಪೇಟೆಯ ಟ್ಯಾಂಕ್‌ ಬಂಡ್‌ ರಸ್ತೆಯ ಇಟಿಎ ಮಾಲ್‌ ಬಳಿ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂ. ನಗದನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Advertisement

ಶನಿವಾರ ಸಂಜೆ 4 ಗಂಟೆಯಲ್ಲಿ ವೆಂಕಟೇಶ್‌ ಎಂಬುವವರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಕಾರನ್ನು ತಡೆದು ಪರಿಶೀಲಿಸಿದಾಗ 2 ಕೋಟಿ ರೂ. ನಗದು ಹಣ ಪತ್ತೆಯಾಗಿದೆ.

ಇನ್ನು ಕಾರಿನಲ್ಲಿ ಸಿಕ್ಕ ಹಣ ಬಿಜೆಪಿ ಸೇರಿದ್ದು ಎನ್ನಲಾಗಿದೆ. ಮಲ್ಲೇಶ್ವರದ ಕೋದಂಡರಾಮಪುರ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಮಾ.27ರಂದು ಈ ಹಣ ಡ್ರಾ ಮಾಡಲಾಗಿತ್ತು. ಚುನಾವಣಾಧಿಕಾರಿಗಳಿಂದ ದೂರು ಸ್ವೀಕರಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಟನ್‌ಪೇಟೆ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಹಣದ ಮೂಲ ಕೆದಕಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆ ಆಗಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next