Advertisement

ಪುಲ್ವಾಮದಲ್ಲಿ ಮತ್ತೆ ಉಗ್ರರ ದಾಳಿ: ಇಬ್ಬರು CRPF ಯೋಧರು ಹುತಾತ್ಮ, ಐವರಿಗೆ ಗಾಯ

03:08 PM Oct 05, 2020 | Mithun PG |

ಜಮ್ಮುಕಾಶ್ಮೀರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಇಬ್ಬರು ಯೋಧರು ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

ಗಾಯಗೊಂಡ ಯೋಧರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರತರವಾಗಿ ಗಾಯಗೊಂಡಿದ್ದರಿಂದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ 12;50 ರ ವೇಳೆಗೆ ಪುಲ್ವಾಮ ಜಿಲ್ಲೆಯ ಪ್ಯಾಂಪೊರ್ ಬೈಪಾಸ್ ಬಳಿ ಉಗ್ರರು ದಾಳಿ ನಡೆಸಿದ್ದಾರೆ. ಇದೀಗ ಸ್ಥಳದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ಭದ್ರತಾ ಪಡೆಗಳಿಂದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ವಂಚನೆ ಆರೋಪ: ಆಂಧ್ರ ಪೊಲೀಸರಿಂದ ಪುತ್ತೂರು ಯುವಕನ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next