ಚನ್ನಪಟ್ಟಣ: ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ 2 ದಿನಗಳ ಕ್ಷೇತ್ರ ಪ್ರವಾಸ ಸಂದರ್ಭದಲ್ಲಿ ತಾಲೂಕಿನ 7461 ರೈತರ 33.79 ಕೋಟಿ ರೂ. ಹಾಗೂ ಸಹಕಾರ ಸಂಘಗಳ ಸಾಲಮನ್ನಾ ಋಣಮುಕ್ತ ಪತ್ರ ವಿತರಿಸಿ, ನೂರಾರು ಕೋಟಿ ರೂ. ವೆಚ್ಚದ ಹಲವು ಜನಪರ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಪ್ರಗತಿ ಪರಿಶೀಲಿಸಿ ಜನತಾ ದರ್ಶನ ನಡೆಸಲಿದ್ದಾರೆ. ತಾಲೂಕಿನ ಅಕ್ಕೂರು ಜಿಪಂ ವ್ಯಾಪ್ತಿಯ 931 ರೈತರ 4.34 ಕೋಟಿ ರೂ,. ಬೇವೂರು ಜಿಪಂ ವ್ಯಾಪ್ತಿಯ 1673 ರೈತರ 7.80 ಲಕ್ಷರೂ. ಹೊಂಗನೂರು ಜಿಪಂ ವ್ಯಾಪ್ತಿಯ 1048 ರೈತರ 4.61ಕೋಟಿ ರೂ., ಕೋಡಂ ಬಳ್ಳಿ ಜಿಪಂ ವ್ಯಾಪ್ತಿಯ 1789 ರೈತರ 8.35 ಕೋಟಿ ರೂ. ಹಾಗೂ ಮಳೂರು ಜಿಪಂ ವ್ಯಾಪ್ತಿಯ 2020 ರೈತರ 8.96 ಕೋಟಿ ರೂ. ಸಹಕಾರ ಸಂಘಗಳ ಸಾಲಮನ್ನಾ ಋಣಮುಕ್ತ ಪತ್ರಗಳ ವಿತರಣೆ ಮಾಡಲಿದ್ದಾರೆ.
ಶಂಕು ಸ್ಥಾಪನೆ: ಚನ್ನಪಟ್ಟಣ ನಗರ ವ್ಯಾಪ್ತಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಹಾಗೂ ಚರಂಡಿ ಕಾಮಗಾರಿ, ಕೆಆರ್‌ಐಡಿಎಲ್ ವತಿಯಿಂದ ನಗರ ಸಭಾ ವ್ಯಾಪ್ತಿಯಲ್ಲಿ 10 ಕೋಟಿ ರೂ. ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲ ಸೌಕರ್ಯ, ಅಕ್ಕೂರು ಜಿಪಂ ವ್ಯಾಪ್ತಿಯಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ 10 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ, ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಅಕ್ಕೂರು ಹೊಸಹಳ್ಳಿ ಆಸ್ಪತ್ರೆ ಮೇಲ್ದರ್ಜೆಗೆ 12 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ,ಲೋಕೋಪಯೋಗಿ ಇಲಾಖೆಯಿಂದ 28.49 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ, 3.5 ಕೋಟಿ ರೂ. ವೆಚ್ಚದಲ್ಲಿ ಇಗ್ಗಲೂರು ಸರ್ಕಾರಿ ಪಿಯು ಕಾಲೇಜು ಹೆಚ್ಚುವರಿ ಕೊಠಡಿ ನಿರ್ಮಾಣ ,ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 5.3 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಹೊಂಗನೂರು ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಆರ್ ಐಡಿಎಲ್‌ನಿಂದ 70 ಲಕ್ಷ ವೆಚ್ಚದಲ್ಲಿ ಪಶು ಆಸ್ಪತ್ರೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 30 ಲಕ್ಷ ರೂ. ವೆಚ್ಚದಲ್ಲಿ ದೇವರ ಹೊಸಹಳ್ಳಿ ಕೆರೆ ಅಭಿವೃದ್ಧಿ, ಲೋಕೋಪಯೋಗಿ ಇಲಾಖೆ ಯಿಂದ 13.32 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿ, ಕಾವೇರಿ ನೀರಾವರಿ ನಿಗಮ ವತಿಯಿಂದ 7.68 ಕೋಟಿ ರೂ. ವೆಚ್ಚದಲ್ಲಿ ಕೆರೆಗಳಿಗೆ ಪೈಪ್ ಅಳವಡಿಕೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೋಡಂಬಳ್ಳಿ ಜಿಪಂ ವ್ಯಾಪ್ತಿಯಲ್ಲಿ 28.2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, 63 ಲಕ್ಷ ರೂ. ವೆಚ್ಚದಲ್ಲಿ ಅರಳಾಳುಸಂದ್ರ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟಡ, 50 ಲಕ್ಷ ರೂ. ವೆಚ್ಚದಲ್ಲಿ ಕೆರೆಗಳಿಗೆ ಪೈಪ್ ಅಳವಡಿಕೆ ಹಾಗೂ 4.25 ಕೋಟಿ ರೂ. ವೆಚ್ಚದಲ್ಲಿ ಮೆಣಸಿಗನಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ, ಮಳೂರು ಜಿಪಂ ವ್ಯಾಪ್ತಿಯಲ್ಲಿ 22.86 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ನಿರ್ಮಾಣ
ಕಾಮಗಾರಿ, 2.5 ಕೋಟಿ ರೂ.ವೆಚ್ಚದಲ್ಲಿ ಚಕ್ಕೆರೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಚ್ಚುವರಿ ಕಟ್ಟಡ, ತಾಪಂ ವತಿಯಿಂದ 26 ಲಕ್ಷ ರೂ. ವೆಚ್ಚದಲ್ಲಿ ಗ್ರಾಪಂ ಕಟ್ಟಡ ಹಾಗೂ 13.46 ಕೋಟಿ ರೂ. ವೆಚ್ಚದಲ್ಲಿ ಕೆರೆಗಳಿಗೆ ಪೈಪ್ ಅಳವಡಿಸುವ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಲಿದ್ದಾರೆ.
ಎಲ್ಲೆಲ್ಲಿ ಕಾಮಗಾರಿ ಉದ್ಘಾಟನೆ?: ಅಕ್ಕೂರು ಜಿಪಂ ವ್ಯಾಪ್ತಿಯಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ 1.65 ಕೋಟಿ ರೂ. ಕಾಮಗಾರಿ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 18.35 ಕೋಟಿ ರೂ. ಕಾಮಗಾರಿ, ಬೇವೂರು ಜಿಪಂ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆಯ 2.10 ಕೋಟಿ ರೂ. ರಸ್ತೆ ಕಾಮಗಾರಿ ಹಾಗೂ 17.40 ಲಕ್ಷ ವೆಚ್ಚದ ಕಟ್ಟಡ ಕಾಮಗಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8 ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರ, ಹೊಂಗನೂರು ಜಿಪಂ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ 15.65 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, ಚನ್ನಪಟ್ಟಣ ನಗರ ವ್ಯಾಪ್ತಿಯಲ್ಲಿ 20 ಲಕ್ಷ ವೆಚ್ಚದ ತಾಲೂಕು ಸ್ತ್ರೀ ಶಕ್ತಿ ಭವನ, ಕೋಡಂಬಳ್ಳಿ ಜಿಪಂ ಕ್ಷೇತ್ರದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 6.7 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ, 9.17 ಲಕ್ಷ ವೆಚ್ಚದ ಅಂಗನವಾಡಿ ಕೇಂದ್ರ, ಮಳೂರು ಜಿಪಂ ಕ್ಷೇತ್ರ ವ್ಯಾಪ್ತಿಯ 12.1 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ, 9.17 ಲಕ್ಷ ರೂ. ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದಾರೆ.
ಜಿಲ್ಲೆಯಲ್ಲಿ ರೈತರ 170.42 ಕೋಟಿ ಸಾಲ ಮನ್ನಾ: ರಾಮನಗರ: ಸಿಎಂ ಕುಮಾರಸ್ವಾಮಿ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 16ರ ಸೋಮವಾರ ಪ್ರವಾಸ ಹಮ್ಮಿಕೊಂಡಿದ್ದು, ವಿವಿಧ ಜನಪರ ಯೋಜನೆಗಳಿಗೆ ಚಾಲನೆ ನೀಡುವರಲ್ಲದೆ ತಾಲೂಕಿನ ಸಹಕಾರ ಸಂಘಗಳಲ್ಲಿ ಸಾಲ ಮಾಡಿರುವ 7461 ರೈತರ ಋಣಮುಕ್ತ ಪತ್ರಗಳನ್ನು ವಿತರಿಸುವರು. ಜಿಲ್ಲೆಯಲ್ಲಿ 34419 ರೈತರ 170.42 ಕೋಟಿ ರೂ ಸಾಲ ಮನ್ನಾ ಆಗಲಿದೆ ಎಂದು ಮಾಹಿತಿ ಸಿಕ್ಕಿದೆ. ಜಿಲ್ಲಾ ಬ್ಯಾಂಕುಗಳು ಮತ್ತು ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ಈ ಮಾಹಿತಿ ಲಭ್ಯವಾಗಿದೆ.
ಪ್ರಾಥಮಿಕ ಸಹಕಾರ ಸಂಘಗಳ 31344 ಸಾಲಗಾರರ 141.95 ಕೋಟಿ ರೂ ಮನ್ನಾಕ್ಕೆ ಸರ್ಕಾರ ನಿರ್ಧರಿಸಿದೆ. ಈ ಪೈಕಿ ಮಾಗಡಿಯ 10880 ಸಾಲಗಾರರ 48.82 ಕೋಟಿ, ಚನ್ನಪಟ್ಟಣದ 7641 ಸಾಲಗಾರರ 33.79 ಕೋಟಿ, ರಾಮನಗರದ 5772 ಸಾಲಗಾರರ 25.98 ಕೋಟಿ, ಕನಕಪುರದ 7051 ಸಾಲಗಾರರ 33.35 ಕೋಟಿ ಒಟ್ಟು 141.95 ಕೋಟಿ ರೂ ಸಾಲ ಮನ್ನಾ ಆಗಲಿದೆ. ಈ ಪೈಕಿ ಮಾಗಡಿಯ 358 ಸಾಲಗಾರರ 3.74 ಕೋಟಿ ರೂ, ಚನ್ನಪಟ್ಟಣದ 931 ಸಾಲಗಾರರ 9.14 ಕೋಟಿ, ರಾಮನಗರದ 794 ಸಾಲಗಾರರ 7.93 ಕೋಟಿ, ಕನಕಪುರದ 992ಸಾಲಗಾರರ 7.65 ಕೋಟಿ ರೂ ಸಾಲಮನ್ನಾದ ಹಣವನ್ನು ಬ್ಯಾಂಕುಗಳಿಗೆ ಪಾವತಿಸಲಾಗಿದೆ ಎಂದು ಮಾಹಿತಿ ದೊರೆತಿದೆ.