Advertisement

ದಕ್ಷಿಣ ಕನ್ನಡ : ಭಾರಿ ಮಳೆ ಹಿನ್ನೆಲೆ; ಶಾಲಾ -ಕಾಲೇಜು ಗಳಿಗೆ 2  ದಿನ ರಜೆ

08:39 PM Jul 07, 2022 | Team Udayavani |

ಮಂಗಳೂರು: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯಲಿದ್ದು, ಜುಲೈ 8 ಮತ್ತು9 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಅಂಗನವಾಡಿ, ಶಾಲಾ, ಕಾಲೇಜು ಗಳಿಗೆ ರಜೆ ಘೋಷಿಸಿದೆ.

Advertisement

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶುಕ್ರವಾರ ಮತ್ತು ಶನಿವಾರ ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಗುಡ್ಡ ಕುಸಿತದಂತಹ ಪ್ರಕರಣಗಳು ಈಗಾಗಲೇ ವರದಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next