Advertisement
ಕಳೆದ ಎರಡು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೆ„ ಸುಳಿಗಾಳಿ ಹಾಗೂ ಟ್ರಫ್ ನಿರ್ಮಾಣವಾದ್ದರಿಂದ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿತ್ತು. ಇದೀಗ ತಮಿಳುನಾಡು ಭಾಗದಲ್ಲಿಯೂ ಟ್ರಫ್ ನಿರ್ಮಾಣವಾದ ಪರಿಣಾಮ ದಕ್ಷಿಣ ಒಳನಾಡಿನ ದಕ್ಷಿಣ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Related Articles
Advertisement
ಬೆಂಗಳೂರಿನಲ್ಲಿ ಭಾರೀ ಮಳೆ: ರಾಜ್ಯದ ಇತರೆ ಭಾಗಗಳಿಗಿಂ ತಲೂ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ನಗರದ ಕೇಂದ್ರ ಭಾಗದ ಕೆಲವೆಡೆ 60 ಮಿ.ಮೀ.ಗಿಂತಲೂ ಹೆಚ್ಚಿನ ಮಳೆ ಸುರಿದಿದೆ. ಜೋರಾದ ಗಾಳಿಗೆ ಮರಗಳು ಧರೆಗುರುಳಿವೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಜತೆಗೆ ಬೆಳಗಾವಿಯಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಲ್ಲಿ ಟ್ರಫ್ ನಿರ್ಮಾಣವಾಗಿರುವುದರಿಂದ ದಕ್ಷಿಣ ಒಳನಾಡಿನ ದಕ್ಷಿಣ ಭಾಗದಲ್ಲಿ ಮಳೆಯಾಗಿದೆ. 2 ದಿನ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. • ಶ್ರೀನಿವಾಸರೆಡ್ಡಿ, ಅಧ್ಯಕ್ಷರು, ವಿಪತ್ತು ನಿರ್ವಹಣಾ ಕೇಂದ್ರ