Advertisement

ಐಷಾರಾಮಿ ಹೋಟೆಲ್ ನಲ್ಲಿ ಅಗ್ನಿ ಅವಘಡ :ಇಬ್ಬರು ಸಾವು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

12:17 PM Sep 05, 2022 | Team Udayavani |

ಲಕ್ನೋ : ನಗರದ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು ಹತ್ತು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಜ್ರತ್ ಗಂಜ್ ಪ್ರದೇಶದಲ್ಲಿ ಸೋಮವಾರ ಸಂಭವಿಸಿದೆ.

Advertisement

ಹೋಟೆಲ್ ನ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸ್ಥಳಕ್ಕೆ ಮೂರು ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ದಳದ ದೌಡಾಯಿಸಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಹೇಳಿದ್ದಾರೆ.

ಹೋಟೆಲ್ ಒಳಗೆ ಹೆಚ್ಚಿನ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಅಲ್ಲದೆ ರಕ್ಷಣಾ ಸಿಬ್ಬಂದಿ ಹೋಟೆಲ್ ನ ಕಿಟಕಿಯ ಗಾಜುಗಳನ್ನು ಒಡೆದು ಒಳಗೆ ಸಿಲುಕಿದವರ ರಕ್ಷಣೆ ಮಾಡಿದ್ದಾರೆ ಹತ್ತು ಮಂದಿಯನ್ನು ರಕ್ಷಣೆ ಮಾಡಿದ್ದು ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೇಸರ ವ್ಯಕ್ತಪಡಿಸಿದ್ದು ಗಾಯಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.
ಅಲ್ಲದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಕೂಡಾ ಘಟನೆಯ ವಿವರಗಳನ್ನು ಪಡೆದುಕೊಂಡಿದ್ದಾರೆ, ರಕ್ಷಣೆಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next