ಡೆಹ್ರಾಡೂನ್: ಮಳೆಯ ಆರ್ಭಟಕ್ಕೆ ಉತ್ತರಾಖಂಡ ಅಕ್ಷರಶಃ ತತ್ತರಿಸಿದೆ. ಮಳೆ ಅನಾಹುತಕ್ಕೆ ಇಬ್ಬರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಾರ್ ಧಾಮ್ ಯಾತ್ರಾರ್ಥಿಗಳು ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು.
ಯಾತ್ರಾರ್ಥಿಗಳು ಇರುವ ಸ್ಥಳವನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿಯೂ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿದೆ. ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ನೈನಿತಾಲ್, ಚಂಪಾವತ್, ಪಿಥೋರಗಢ, ಬಾಗೇಶ್ವರ್, ಡೆಹ್ರಾಡೂನ್, ತೆಹ್ರಿ ಮತ್ತು ಪೌರಿ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.