ನೋಯ್ಡಾ: ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ಶನಿವಾರ(ಆಗಸ್ಟ್ 1-2020)ದಂದು ನಡೆದಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಸೆಕ್ಟರ್ 11ರಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಇದು ಖಾಸಗಿ ಸಂಸ್ಥೆಗೆ ಸೇರಿದ್ದಾಗಿದೆ ಎಂದು ವರದಿ ತಿಳಿಸಿದೆ. ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(ಎನ್ ಡಿಆರ್ ಎಫ್) ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಮೂವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶ್ರೀಪರ್ಣಾ ಗಂಗೂಲಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಘಟನೆಯಲ್ಲಿ ಸಾವನ್ನಪ್ಪಿದ್ದವರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.