Advertisement

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

11:44 PM Nov 27, 2024 | Team Udayavani |

ಬೆಂಗಳೂರು: 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರಕಾರಿ ನೌಕರರಿಗೆ ನೀಡಲಾಗುತ್ತಿರುವ ತುಟ್ಟಿಭತ್ಯೆ ಮೊತ್ತವನ್ನು ಪ್ರಸ್ತುತ ಮೂಲ ವೇತನದ ಶೇ. 8.50ರಿಂದ ಶೇ. 10.75ಕ್ಕೆ ಪರಿಷ್ಕರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅಂದರೆ, ಶೇ. 2.22ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತೆ ಆಗಿದೆ.

Advertisement

2024ರ ಜುಲೈ 1ರಿಂದ ಜಾರಿಗೆ ಬರುವಂತೆ ಸರಕಾರಿ ನೌಕರರಿಗೆ ಪರಿಷ್ಕೃತ ತುಟ್ಟಿಭತ್ಯೆ 2024ರ ಆಗಸ್ಟ್‌ನಿಂದ ಸಿಗಲಿದೆ. ಈ ಆದೇಶವು ಸರಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳಲ್ಲಿ ಪೂರ್ಣಾವಧಿ ವರ್ಕ್‌ ಜಾರ್ಜ್‌ ನೌಕರರು ಹಾಗೂ ಸರಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ನೌಕರರಿಗೆ ಅನ್ವಯವಾಗಲಿದೆ. ಯುಜಿಸಿ/ಎಐಸಿಟಿಇ/ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತ ನೌಕರರಿರೂ ಅನ್ವಯವಾಗಲಿದ್ದು, ಪ್ರತ್ಯೇಕ ಆದೇಶ ಹೊರಡಿಸಲಾಗುವುದು.

ರಾಜ್ಯ ಸರಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿದಾರರಿಗೂ ಈ ಪಿಂಚಣಿ ಪರಿಷ್ಕರಣೆ ಅನ್ವಯವಾಗಲಿದೆ.

ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿಸಬೇಕು. ಬಾಕಿ ಮೊತ್ತವನ್ನು 2024ರ ಡಿಸೆಂಬರ್‌ ವೇತನ ಬಟವಾಡೆಗೂ ಮೊದಲು ಪಾವತಿ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಸಿಎಂಗೆ ಅಭಿನಂದನೆ:
2024ರ ಆಗಸ್ಟ್‌ನಿಂದ ಬಾಕಿ ಇದ್ದ ತುಟ್ಟಿಭತ್ಯೆ ಸಂಘದ ಮನವಿಗೆ ಸ್ಪಂದಿಸಿ ಸರಕಾರ ಬಿಡುಗಡೆಗೊಳಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದೆ. ಶೇ 2.22 ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಿದ್ದು, ಇದರಿಂದ ಸರಕಾರಿ ನೌಕರರ ಮೂಲ ವೇತನದಲ್ಲಿ ಶೇ 8.50 ರಿಂದ ಶೆ‌ 10.75 ರಷ್ಟು ಹೆಚ್ಚಳವಾಗಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next