Advertisement
2024ರ ಜುಲೈ 1ರಿಂದ ಜಾರಿಗೆ ಬರುವಂತೆ ಸರಕಾರಿ ನೌಕರರಿಗೆ ಪರಿಷ್ಕೃತ ತುಟ್ಟಿಭತ್ಯೆ 2024ರ ಆಗಸ್ಟ್ನಿಂದ ಸಿಗಲಿದೆ. ಈ ಆದೇಶವು ಸರಕಾರದ ಮತ್ತು ಜಿಲ್ಲಾ ಪಂಚಾಯತ್ಗಳಲ್ಲಿ ಪೂರ್ಣಾವಧಿ ವರ್ಕ್ ಜಾರ್ಜ್ ನೌಕರರು ಹಾಗೂ ಸರಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ನೌಕರರಿಗೆ ಅನ್ವಯವಾಗಲಿದೆ. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿರೂ ಅನ್ವಯವಾಗಲಿದ್ದು, ಪ್ರತ್ಯೇಕ ಆದೇಶ ಹೊರಡಿಸಲಾಗುವುದು.
Related Articles
2024ರ ಆಗಸ್ಟ್ನಿಂದ ಬಾಕಿ ಇದ್ದ ತುಟ್ಟಿಭತ್ಯೆ ಸಂಘದ ಮನವಿಗೆ ಸ್ಪಂದಿಸಿ ಸರಕಾರ ಬಿಡುಗಡೆಗೊಳಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದೆ. ಶೇ 2.22 ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಿದ್ದು, ಇದರಿಂದ ಸರಕಾರಿ ನೌಕರರ ಮೂಲ ವೇತನದಲ್ಲಿ ಶೇ 8.50 ರಿಂದ ಶೆ 10.75 ರಷ್ಟು ಹೆಚ್ಚಳವಾಗಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
Advertisement