Advertisement

ಲಾಕ್ ಡೌನ್ ನಿಯಮ ಉಲ್ಲಂಘನೆ: ದೆಹಲಿ ಸರ್ಕಾರದ ಇಬ್ಬರು ಅಧಿಕಾರಿಗಳು ಅಮಾನತು

09:49 AM Mar 31, 2020 | Mithun PG |

ನವದೆಹಲಿ: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಜಾರಿಗೊಳಿಸಲು ವಿಫಲರಾದ ಕಾರಣದಿಂದ ದೆಹಲಿ ಸರ್ಕಾರದ ಇಬ್ಬರು ಐಏಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇನ್ನಿಬ್ಬರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

Advertisement

ದೆಹಲಿ ಸರ್ಕಾರದ ಸಾರಿಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ , 1988ನೇ ಬ್ಯಾಚ್ ನ ಐಎಎಸ್ ಅಧಿಕಾರಿ ರೇಣು ಶರ್ಮಾ ಹಾಗೂ ಹಣಕಾಸು ಇಲಾಖೆಯ ಪ್ರಧಾನ ಮಾರ್ಗದರ್ಶಿ, 1992ನೇ ಬ್ಯಾಚ್ ನ ಐಎಎಸ್ ಅಧಿಕಾರಿ ರಾಜೀವ್ ವರ್ಮಾ ಅವರನ್ನು ಕೇಂದ್ರ ಗೃಹ ಇಲಾಖೆ ಅಮಾನತು ಗೊಳಿಸಿದೆ.

ಮಾತ್ರವಲ್ಲದೆ ದೆಹಲಿ ಸರ್ಕಾರದ ಭೂಮಿ ಮತ್ತು ಭವನ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಸೀಲಂಪುರದ ಸಬ್ ಡಿವಿಜನಲ್ ಮ್ಯಾಜಿಸ್ಟ್ರೇಟ್ ಅವರ ವಿರುದ್ಧವೂ ಕ್ರಮ ತೆಗೆದುಕೊಂಡಿರುವುದಾಗಿ ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಈ ನಾಲ್ವರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಮರ್ಪಕ ಕಾರಣ ತಿಳಿದುಬಂದಿಲ್ಲ. ಆದರೆ ಕರ್ತವ್ಯದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳಲು ವಿಫಲರಾಗಿದ್ದು, ಸರ್ಕಾರದ ಲಾಕ್ ಡೌನ್ ಆದೇಶ ಉಲ್ಲಂಘಿಸಿರುವುದು ಮುಂತಾದ ಕಾರಣಗಳಿಂದ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next