ಕ್ಯಾಟಿ (ಟೆಕ್ಸಸ್): ಅಮೆರಿಕದ ಟೆಕ್ಸಸ್‌ನಲ್ಲಿ ನಡೆದ ಗುಂಡು ಹಾರಾಟ ಪ್ರಕರಣದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಇಂಥ ಕೃತ್ಯವನ್ನು ಎಸಗಿದ ವ್ಯಕ್ತಿಯನ್ನು ಪೊಲೀಸರು ಕೊಂದು ಹಾಕಿದ್ದಾರೆ.ಹ್ಯೂಸ್ಟನ್‌ನಿಂದ 48 ಕಿಮೀ ದೂರದಲ್ಲಿರುವ ಕ್ಯಾಟಿ ಎಂಬಲ್ಲಿ ಈ ಘಟನೆ ನಡೆದಿದೆ.
ಸ್ಥಳೀಯ ಆಡಳಿತ ವ್ಯವಸ್ಥೆಯ ಇಬ್ಬರು ಅಧಿಕಾರಿಗಳನ್ನು ಗುರಿಯಾಗಿ ಇರಿಸಿಕೊಂಡು ವ್ಯಕ್ತಿ ಗುಂಡು ಹಾರಿಸಿದ್ದ. ಅವರಿಗೆ ಅಲ್ಪ ಪ್ರಮಾಣದ ಗಾಯಗಳಾಗಿದ್ದು, ಅಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಪುನರ್ವಸತಿ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಆದಿವಾಸಿಗಳನ್ನು ಸೇರಿಸಲು ಆಗ್ರಹ
ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕೃತ್ಯವೆಸಗಿದಾತನನ್ನು ಕೊಲ್ಲಲಾಗಿದೆ.