Advertisement

ಹರಿಯಾಣ: ನುಹ್‌ನಲ್ಲಿ ಮುಂದುವರೆದ ಬುಲ್ಡೋಜರ್ ಕಾರ್ಯಾಚರಣೆ, 20ಕ್ಕೂ ಹೆಚ್ಚು ಮೆಡಿಕಲ್‌ ನೆಲಸಮ

12:29 PM Aug 05, 2023 | Team Udayavani |

ಹರಿಯಾಣ: ಸರಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮ ಕಟ್ಟಡ ನಿರ್ಮಿಸಿದವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು ಇದೀಗ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ ಇಂದೂ ಕೂಡ ಮುಂದುವರೆದಿದೆ.

Advertisement

ಕಳೆದ ಕೆಲ ದಿನಗಳ ಹಿಂದೆ ಹರಿಯಾಣದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ಬೇರು ಸಮೇತ ಕಿತ್ತು ಹಾಕಲು ಬುಲ್ಡೋಜರ್ ಕಾರ್ಯಾಚರಣೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ಹರಿಯಾಣದ ನುಹ್ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಸುಮಾರು 200 ಗುಡಿಸಲುಗಳನ್ನು ನೆಲಸಮಗೊಳಿಸಲಾಗಿತ್ತು. ಇದೀಗ ಮುಂದಿನ ಭಾಗವಾಗಿ ಶನಿವಾರ ಇಲ್ಲಿನ ಆಸ್ಪತ್ರೆಯ ಮುಖ್ಯ ದ್ವಾರದ ಎದುರುಗಡೆ ಇರುವ ಅಂಗಡಿಗಳು ಸೇರಿದಂತೆ ಸುಮಾರು ಹನ್ನೆರಡು ಔಷಧಾಲಯಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಯಿತು.

ಕಾರ್ಯಾಚರಣೆ ನಡೆಯುವ ವೇಳೆ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿತ್ತು ಜೊತೆಗೆ ಸರಕಾರಿ ಅಧಿಕಾರಿಗಳೂ ಸ್ಥಳದಲ್ಲಿದ್ದರು.

ಹರಿಯಾಣ ಹಾಗೂ ನುಹ್ ನಲ್ಲಿ ನಡೆದ ಗಲಭೆಗಳಲ್ಲಿ ಹೆಚ್ಚಿನವರು ಹೊರಗಿನಿಂದ ಬಂದು ಅಕ್ರಮವಾಗಿ ನೆಲೆಸಿರುವ ವಲಸಿಗರು ಸೇರಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

Advertisement

ಇದನ್ನೂ ಓದಿ: Manipur: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ-ಮಲಗಿದ್ದ ಮೂವರು ಗುಂಡಿಗೆ ಬಲಿ

ಸಮಾಜಘಾತುಕರ ಕಟ್ಟಡಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಆದೇಶಿಸಿದ್ದು. ಆದೇಶ ಹೊರ ಬಿದ್ದ ಕೂಡಲೇ ಕಾರ್ಯಪ್ರವೃತ್ತರಾದ ನುಹ್ ಜಿಲ್ಲಾಡಳಿತ ಅಕ್ರಮ ಕಟ್ಟಡಗಳನ್ನು ಕೆಡವಲು ಮುಂದಾಗಿದೆ ಇದರೊಂದಿಗೆ ದೊಂಬಿ ಎಬ್ಬಿಸಿದ ಸಮಾಜ ಘಾತುಕರಿಗೆ ಬಿಸಿ ಮುಟ್ಟಿಸಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next