Advertisement

ತೀವ್ರ ವಿರೋಧದ ನಡುವೆ ಕೃಷಿಗೆ ಸಂಬಂಧಿಸಿದ 2 ಮಸೂದೆಗಳಿಗೆ ರಾಜ್ಯಸಭೆಯಲ್ಲಿ ಅಂಗೀಕಾರ

03:33 PM Sep 20, 2020 | Mithun PG |

ನವದೆಹಲಿ: ತೀವ್ರ ವಿರೋಧದ ನಡುವೆಯೂ ಕೃಷಿಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಧ್ವನಿ ಮತದ ಮೂಲಕ ರಾಜ್ಯಸಭೆಯಲ್ಲಿ ಅಂಗಿಕರಿಸಲಾಗಿದೆ.

Advertisement

ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ  ಮಸೂದೆ 2020  (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಗಳಿಗೆ ಅಂಗಿಕಾರವನ್ನು ಪಡೆಯಲು ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.

ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ, ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಿದವು, ಪ್ರತಿಭಟನೆಯ ನಡುವೆಯೇ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಾತ್ರವಲ್ಲದೆ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಸೋಮವಾರ ಬೆಳಿಗ್ಗೆ 9 ಗಂಟೆವರೆಗೆ ಮುಂದೂಡಲಾಗಿದೆ.

ಇದನ್ನೂ ಓದಿ:ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ: ರೈತರ ಡೆತ್ ವಾರೆಂಟ್ ಗೆ ಸಹಿ ಮಾಡಲ್ಲವೆಂದ ಕಾಂಗ್ರೆಸ್ !

ಧ್ವನಿ ಮತದ ವೇಳೆ, ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗೆ ಧಾವಿಸಿ ನಿಯಮ ಪುಸ್ತಕ ಹರಿದು ಹಾಕಿದ್ದಾರೆ. ಮಾತ್ರವಲ್ಲದೆ ಉಪಸಭಾಧ್ಯಕ್ಷರ ಮೈಕ್ರೋಫೋನ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಇದರಿಂದ ಚರ್ಚೆಯೂ ಗೊಂದಲದಲ್ಲಿ 10  ನಿಮಿಷಗಳ ಕಾಲ ಮುಂದೂಡಿಕೆಯಾಗಿತ್ತು. ನಂತರ ಸದನ ಆರಂಭಗೊಂಡಾಗ ಧ್ವನಿ ಮತದ ಮೂಲಕ ಕೃಷಿ ಮಸೂದೆಗೆ ಅಂಗೀಕಾರ ದೊರೆತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next