Advertisement

Karnataka Politics; ಧಾರವಾಡದ 2 ಮಾಜಿ ಶಾಸಕರು ಕಾಂಗ್ರೆಸ್ ಗೆ ಸೇರುತ್ತಾರೆ: ಸಚಿವ ಲಾಡ್

06:47 PM Aug 27, 2023 | Team Udayavani |

ಧಾರವಾಡ: ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಇರುವ ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದು, ಈ ಪೈಕಿ ಧಾರವಾಡ ಜಿಲ್ಲೆಯಿಂದಲೂ ಬಿಜೆಪಿ ಪಕ್ಷದ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

Advertisement

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವಲಗುಂದದ ಮಾಜಿ ಶಾಸಕರು, ಮಾಜಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಕುಂದಗೋಳದ ಮಾಜಿ ಶಾಸಕರಾದ ಎಸ್.ಐ.ಚಿಕ್ಕನಗೌಡ್ರ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎಂಬ ಮಾಹಿತಿ ಇದೆ. ಈ ರೀತಿಯಲ್ಲಿ ವಿವಿಧ ಜಿಲ್ಲೆಗಳಲ್ಲಿಯೂ ಬಿಜೆಪಿಗರು ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಒಪ್ಪಿಕೊಂಡು ಬರಲಿದ್ದಾರೆ ಎಂದರು.

ಇದನ್ನೂ ಓದಿ:Asia Cup 2023; ತಂಡ ಪ್ರಕಟಿಸಿದ ಅಫ್ಘಾನ್: ನವೀನ್ ಉಲ್ ಹಕ್ ಗಿಲ್ಲ ಅವಕಾಶ

ಈ ಹಿಂದಿನ ಬಿಜೆಪಿ ಸರಕಾರ ಮಾಡಿರುವ ಹಗರಣ, ಭ್ರಷ್ಟಾಚಾರಗಳ ಸಂಪೂರ್ಣ ತನಿಖೆ ಮಾಡಲಿದ್ದು, ಈಗಾಗಲೇ ಇಲಾಖಾವಾರು ಮಾಹಿತಿ ಕಲೆ ಹಾಕುವ ಕಾರ್ಯವೂ ಸಾಗಿದೆ. ಇದಲ್ಲದೇ ಕೆಲ ಇಲಾಖೆಗಳಲ್ಲಿ ಈಗಾಗಲೇ ತನಿಖೆಯನ್ನೂ ಆರಂಭಿಸಿದ್ದು, ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆಯೋ ಆ ಎಲ್ಲವನ್ನೂ ತನಿಖೆ ಮಾಡುತ್ತೇವೆ. ವಿಪಕ್ಷದಲ್ಲಿ ನಾವು ಈ ತನಿಖೆಗೆ ಒತ್ತಾಯ ಮಾಡಿದ್ದೇವು. ಈಗ ನಮ್ಮದೇ ಆಡಳಿತವಿದ್ದು, ಹೀಗಾಗಿ ಎಲ್ಲವನ್ನೂ ತನಿಖೆ ಮಾಡಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next