ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಉಳ್ಳೆಸುಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬಳಿಕ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲುತೂರಾಟ ನಡೆದಿದ್ದು ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆಯಲ್ಲಿ ಹಲವರಿಗೆ ತೀವ್ರ ಗಾಯಗಳಾಗಿದ್ದು, ಎರಡು ಕಾರು ಹಾಗೂ ಬೈಕ್ ಜಖಂಗೊಂಡಿದ್ದು, ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇಲ್ಲಿನ ಗ್ರಾಮ ಪಂಚಾಯಿತಿ 20 ಸದಸ್ಯ ಬಲ ಹೊಂದಿದ್ದು, ಅಧ್ಯಕ್ಷ ಹಾಗೂ ಉಪಾದ್ಯಕ್ಷ ಎರಡೂ ಸ್ಥಾನಗಳು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ಇವರಲ್ಲಿ ಕಾಂಗ್ರೆಸ್ ಬೆಂಬಲಿತ 11 ಸದಸ್ಯರಿದ್ದು, 9 ಬಿಜೆಪಿ ಸದಸ್ಯರಿದ್ದಾರೆ. ಇಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭಾಗ್ಯಶ್ರೀ ಪಾಟೀಲ್ ಅಧ್ಯಕ್ಷೆಯಾಗಿದ್ದು ಉಪಾಧ್ಯಕ್ಷೆಯಾಗಿ ಶ್ರೀದೇವಿ ಪಾಟೀಲ್ ತೇಕರಾಳ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:ಉತ್ತರಕಾಶಿ ಗಂಗೋರಿ ಆಶ್ರಮದಲ್ಲಿ ತಪೋವನಿ ಮಾತಾ ಪಂಚಭೂತಲೀನ
ಕಳೆದ ಡಿಸೆಂಬರ 27 ರಂದು ಗ್ರಾಮ ಪಂಚಾಯತಿಗೆ ಎರಡನೇ ಹಂತದಲ್ಲಿ ಮತದಾನ ನಡೆದಿತ್ತು.