Advertisement

Taiwan Earthquake: ತೈವಾನ್ ಭೂಕಂಪದಲ್ಲಿ ನಾಪತ್ತೆಯಾಗಿದ್ದ 2 ಭಾರತೀಯರು ಸುರಕ್ಷಿತ: ಕೇಂದ್ರ

10:15 AM Apr 05, 2024 | Team Udayavani |

ನವದೆಹಲಿ: ಕಳೆದ ಬುಧವಾರ ತೈವಾನ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಬಳಿಕ ನಾಪತ್ತೆಯಾಗಿದ್ದ ಇಬ್ಬರು ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.

Advertisement

ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತೈವಾನ್ ನಲ್ಲಿ ಸಂಭವಿಸಿದ ಭೂಕಂಪದಲ್ಲಿ ನಾಪತ್ತೆಯಾಗಿರುವ ಇಬ್ಬರು ಭಾರತೀಯರನ್ನು ಭೂಕಂಪದ ಹಿನ್ನೆಲೆಯಲ್ಲಿ ಅವರ ಸಂಪರ್ಕ ಸಾಧಿಸಲು ಸಾಧ್ಯವಾಗಲಿಲ್ಲ ಆದರೆ ಈಗ ಅವರನ್ನು ಸಂಪರ್ಕಿಸಿದ್ದೇವೆ ಮತ್ತು ಅವರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಬುಧವಾರ ಬೆಳಿಗ್ಗೆ ಸಂಭವಿಸಿದ 7.2 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ನಾಪತ್ತೆಯಾಗಿರುವವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ, ಭೂಕಂಪದ ಪರಿಣಾಮ ಹತ್ತಕ್ಕೂ ಹೆಚ್ಚು ಕಟ್ಟಡಗಳು ನೆಲಸಮಗೊಂಡಿದೆ.

ಇದನ್ನೂ ಓದಿ: Arrested: ಪುದುವೆಟ್ಟು ಪೈಪ್‌ಲೈನ್‌ನಲ್ಲಿ ಡೀಸೆಲ್‌ ಕಳವಿನ ಪ್ರಕರಣ; ಐವರು ಆರೋಪಿಗಳ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next