ಜಮ್ಮು-ಕಾಶ್ಮೀರ; ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಇಬ್ಬರು ಸಹಚರರನ್ನು ಸೋಮವಾರ (ಡಿಸೆಂಬರ್ 20) ಭದ್ರತಾ ಪಡೆ ಬಂಧಿಸಿರುವ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಮತಾಂತರ ಮಸೂದೆಗೆ ಕ್ಯಾಬಿನೆಟ್ ಅನುಮೋದನೆ : ನಾಳೆ ಮಂಡನೆ ಸಾಧ್ಯತೆ
ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು, ಸಿಆರ್ ಪಿಎಫ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರರಿಗೆ ಆಶ್ರಯ, ಶಸ್ತ್ರಾಸ್ತ್ರ ಸರಬರಾಜು ಸೇರಿದಂತೆ ಇನ್ನಿತರ ರೀತಿಯಲ್ಲಿ ನೆರವು ನೀಡಿದ್ದ ಇಬ್ಬರನ್ನು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಇಬ್ಬರು ಆರೋಪಿಗಳು ಆವಂತಿಪೋರಾ ಮತ್ತು ತ್ರಾಲ್ ಪ್ರದೇಶಗಳಲ್ಲಿರುವ ಉಗ್ರರಿಗೆ ಶಸ್ತ್ರಾಸ್ತ್ರ, ಸ್ಫೋಟಕ ಮತ್ತು ಸ್ಫೋಟಕ ತಯಾರಿಕೆಯ ಉಪಕರಣಗಳನ್ನು ಸರಬರಾಜು ಮಾಡುವ ಕೆಲಸಲ್ಲಿ ಶಾಮೀಲಾಗಿದ್ದರು ಎಂದು ವರದಿ ವಿವರಿಸಿದೆ.
ಇಬ್ಬರೂ ಕೂಡಾ ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಕಮಾಂಡರ್ ಗಳ ಜತೆ ಸಂಪರ್ಕದಲ್ಲಿದ್ದು, ಅವರ ಸೂಚನೆಯಂತೆ ಜಮ್ಮು-ಕಾಶ್ಮೀರದಲ್ಲಿ ಉಗ್ರರಿಗೆ ಬೇಕಾದ ನೆರವು ನೀಡುವ ಕೆಲಸ ಮಾಡುತ್ತಿದ್ದರು ಎಂದು ವರದಿ ತಿಳಿಸಿದೆ.