Advertisement

2 ಲಕ್ಷ ಮತಗಳ ಅಂತರದ ಗೆಲುವು: ಶೋಭಾ ವಿಶ್ವಾಸ

08:18 PM May 03, 2019 | Team Udayavani |

ಉಡುಪಿ: ಬಿಜೆಪಿ ದೇಶದಲ್ಲಿ ಒಟ್ಟು 300ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ದೊರೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಗುರುವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಅವಲೋಕನ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಾರ್ಯಕರ್ತರು ಅಭಿನಂದನಾರ್ಹರು ಚುನಾವಣೆ ಒಂದು ಯುದ್ಧ. ಯುದ್ಧ ವನ್ನು ಗೆಲ್ಲಲೇಬೇಕೆಂಬ ಪಣ ತೊಟ್ಟು ಕಾರ್ಯಕರ್ತರು ಹೋರಾಟ ಮಾಡಿದ್ದಾರೆ. ಕೆಲವು ಅನಿರೀಕ್ಷಿತ ಬೆಳವಣಿಗೆಗಳ ನಡುವೆಯೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆಗೈದಿದೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಉತ್ತಮ ಲೀಡ್‌ ತೆಗೆದುಕೊಳ್ಳುವ ವಾತಾವರಣವಿದೆ. ನರೇಂದ್ರ ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಿ ದೇಶದ ಭದ್ರತೆ ಮತ್ತು ಅಭಿವೃದ್ಧಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಲಿದ್ದಾರೆ. ಮೋದಿ ಅಲೆ ಮತದಾರರು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ. ಅವಿರತ ಶ್ರಮ, ಪ್ರಾಮಾಣಿಕ ಸೇವೆಯ ಮೂಲಕ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ನಿರ್ವಹಿಸಿರುವ ಪಕ್ಷದ ಮುಖಂಡರು, ಜಿಲ್ಲಾ ಚುನಾವಣಾ ನಿರ್ವಹಣ ಸಮಿತಿ, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯ ಕರ್ತರು ಅಭಿನಂದನಾರ್ಹರು ಎಂದವರು ತಿಳಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಚುನಾವಣ ಸಂಚಾಲಕ, ರಾಜ್ಯ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭಾ ವಿಪಕ್ಷದ ಮುಖ್ಯ ಸಚೇತಕ ವಿ.ಸುನೀಲ್‌ ಕುಮಾರ್‌, ಕಾಪು ಶಾಸಕ ಲಾಲಾಜಿ ಮೆಂಡನ್‌, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ, ಚಿಕ್ಕಮಗಳೂರು ವಿಭಾಗ ಸಂಘಟನ ಕಾರ್ಯದರ್ಶಿ ಗಣೇಶ್‌ ರಾವ್‌, ಉಡುಪಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ರಾಷ್ಟ್ರಿಯ ಪರಿಷತ್‌ ಸದಸ್ಯೆ ರೇಶ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಜಿಲ್ಲಾ ಕೋಶಾಧಿಕಾರಿ ರವಿ ಅಮೀನ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ಜಿಲ್ಲಾ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಶೆಟ್ಟಿ, ಸಹವಕ್ತಾರ ಎ.ಶಿವಕುಮಾರ್‌, ಚುನಾವಣಾ ನಿರ್ವಹಣ ಸಮಿತಿಯ ಸದಸ್ಯರು, ಜಿಲ್ಲಾ, ಮಂಡಲ, ಮೋರ್ಚಾ, ಪ್ರಕೋಷ್ಠಗಳ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್‌ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್‌ ಸ್ವಾಗತಿಸಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್‌ ವಂದಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್‌ ನಾಯಕ್‌ ನಿರೂಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next