Advertisement

Press: ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ರೂ.

10:22 PM Nov 24, 2023 | Team Udayavani |

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ರೂ. ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ. ನೆರವು ನೀಡಲು ಸರಕಾರ ಮುಂದಾಗಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ ಅನುಷ್ಠಾನಗೊಳಿಸಿರುವ ಆದೇಶವನ್ನು ಕಾರ್ಮಿಕ ಇಲಾಖೆ ಹೊರಡಿಸಿದೆ.

Advertisement

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಈ ಹಿಂದೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಭೇಟಿ ಮಾಡಿ ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ಪತ್ರಿಕಾ ವಿತರಕರು ಕಾರ್ಮಿಕರಾಗಿದ್ದು, ಅವರಿಗೆ ಕನಿಷ್ಠ ಸೌಲಭ್ಯ ಒದಗಿಸುವಂತೆ ತುಮಕೂರು ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಅವರಿಗೆ ಮನವಿ ಮಾಡಲಾಗಿತ್ತು.

ಸಾಗರದಿಂದ ಹೊರಾಟದ ಮೊದಲ ಹೆಜ್ಜೆ
2022ರ ಜು.2ರಂದು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಬೆಳಗ್ಗೆ ಸೈಕಲ್‌ನಲ್ಲಿ ಪತ್ರಿಕೆ ಹಂಚುತ್ತಿದ್ದ ಗಣೇಶ್‌ ಅವರು ಸರಕಾರಿ ಬಸ್‌ ಢಿಕ್ಕಿ ಹೊಡೆದು ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಪರಿಹಾರ ಕೊಡಿಸುವ ಸಂಬಂಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಅವಿರತ ಹೋರಾಟ ಮಾಡಲಾಗಿತ್ತು. ಪರಿಣಾಮ ಕಾರ್ಮಿಕ ಇಲಾಖೆಯಿಂದ ಮೊಟ್ಟ ಮೊದಲ ಬಾರಿಗೆ 2 ಲಕ್ಷ ರೂ. ಪರಿಹಾರ ಧನವನ್ನು ಗಣೇಶ್‌ ಕುಟುಂಬಕ್ಕೆ ನೀಡಿತ್ತು. ಈ ಪ್ರಕರಣ ಭರವಸೆಯ ಮೆಟ್ಟಿಲಾಯಿತು ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next