ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಇಂದು (ಮಂಗಳವಾರ) ಮುಂಜಾನೆ ಶೋಪಿಯಾನ್‌ನ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಎನ್‌ಕೌಂಟರ್ ಆರಂಭವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಟ್ವಿಟರ್ ‘X’ ನಲ್ಲಿ ಮಾಹಿತಿ ಹಂಚಿಕೊಂಡ ಕಾಶ್ಮೀರ ಪೊಲೀಸ್ ಅಧಿಕಾರಿ, ಭಾರತೀಯ ಸೇನೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೈಬಾದ (ಎಲ್‌ಇಟಿ) ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.
ಈ ಉಗ್ರರು ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದು, ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಫೆಬ್ರವರಿಯಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿ ಸಂಜಯ್ ಶರ್ಮಾ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಈ ಉಗ್ರರು ಭಾಗಿಯಾಗಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Daily Horoscope: ಉದ್ಯೋಗ ಕ್ಷೇತ್ರದಲ್ಲಿ ಚಂಚಲ ವಾತಾವರಣ, ವಾಹನ ಚಾಲನೆಯಲ್ಲಿ ಎಚ್ಚರ