Advertisement

Jammu Kashmir: ಪೊಲೀಸ್ ಕಸ್ಟಡಿಯಿಂದ ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರರು ಪರಾರಿ

05:27 PM Apr 05, 2023 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವೈನ್ ಶಾಪ್‌ನಲ್ಲಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರು ಬುಧವಾರ ಬೆಳಿಗ್ಗೆ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.

Advertisement

ತಪ್ಪಿಸಿಕೊಂಡ ಭಯೋತ್ಪಾದಕರನ್ನು ಮರೂಫ್ ನಜೀರ್ ಸೋಲೆಹ್ ಮತ್ತು ಶಾಹಿದ್ ಶೋಕತ್ ಬಾಲಾ ಎಂದು ಗುರುತಿಸಲಾಗಿದ್ದು, ಇವರು ಕಳೆದ ಮೇ 2022 ರಿಂದ ಪೊಲೀಸ್ ಕಸ್ಟಡಿಯಲ್ಲಿದ್ದರು ಎನ್ನಲಾಗಿದ್ದು ಇವರಿಬ್ಬರು ಲಷ್ಕರ್-ಎ -ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರು.

ಇಬ್ಬರು ಹೈಬ್ರಿಡ್ ಉಗ್ರರನ್ನು ಬಂಧಿಸಲು ಬಾರಾಮುಲ್ಲಾ ಮತ್ತು ಉತ್ತರ ಕಾಶ್ಮೀರದ ಇತರ ಭಾಗಗಳಲ್ಲಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಇಬ್ಬರೂ ಭಯೋತ್ಪಾದಕರು ಕಳೆದ ವರ್ಷ ಬಾರಾಮುಲ್ಲಾದ ವೈನ್ ಶಾಪ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: Donald Trump ವಿರುದ್ಧ ದೈಹಿಕ ಸಂಬಂಧದ ಆರೋಪ; ನಟಿಗೆ ಭಾರೀ ಪ್ರಮಾಣದ ದಂಡ ವಿಧಿಸಿದ ಕೋರ್ಟ್

Advertisement

Udayavani is now on Telegram. Click here to join our channel and stay updated with the latest news.

Next