Advertisement

ಜಾರ್ಖಂಡ್‌ನಲ್ಲಿ ಗುಂಡಿನ ಚಕಮಕಿ: ಇಬ್ಬರು ನಕ್ಸಲರ ಹತ್ಯೆ

01:01 PM Sep 02, 2022 | Team Udayavani |

ಸೆರೈಕೆಲಾ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾವಾನ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸಿಆರ್‌ಪಿಎಫ್‌ನ ಕೋಬ್ರಾ, ಜಾರ್ಖಂಡ್ ಜಾಗ್ವಾರ್ ಮತ್ತು ರಾಜ್ಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕುಚೈ ಪೊಲೀಸ್ ಠಾಣೆ ವ್ಯಾಪ್ತಿಯ ಬರುಡಾ ಅರಣ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಸಿಪಿಐ(ಮಾವೋವಾದಿ) ಸದಸ್ಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತದೇಹಗಳನ್ನು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಕೊನೆಯ ವರದಿ ಬಂದಾಗ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಕೊಲ್ಹಾನ್ ವಿಭಾಗದ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಅಜಯ್ ಲಿಂಡಾ ಪಿಟಿಐಗೆ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next