ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ಮತ್ತೆ ಮುಂದುವರೆದಿದ್ದು ಶುಕ್ರವಾರ(ನ.1) ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮಗಮ್ ಪ್ರದೇಶದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿರುವುದಾಗಿ ವರದಿಯಾಗಿದೆ.
ಗಾಯಗೊಂಡ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶದ ನಿವಾಸಿಗಳಾದ ಸಂಜಯ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಗ್ರರ ದಾಳಿ ಬೆನ್ನಲೇ ಭದ್ರತಾ ಪಡೆ ಮಗಮ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದೆ ಎನ್ನಲಾಗಿದೆ,
ಇತ್ತೀಚಿನ ದಿನಗಳಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದು ಕಳೆದ ಕೆಲ ದಿನಗಳ ಹಿಂದೆ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಒಬ್ಬ ವೈದ್ಯ ಮತ್ತು ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದು, ಇದಾದ 12 ದಿನಗಳ ನಂತರ ಈ ದಾಳಿ ನಡೆದಿದೆ.
ಇದನ್ನೂ ಓದಿ: BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್