Advertisement

ಉಧಂಪುರ: ಮನೆ ಕುಸಿದು 3 ವರ್ಷ ಮತ್ತು 2 ತಿಂಗಳ ಶಿಶುಗಳ ಸಾವು

01:41 PM Aug 20, 2022 | Team Udayavani |

ಉಧಂಪುರ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣಿನ ಮನೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

Advertisement

ಶುಕ್ರವಾರ ಮಧ್ಯರಾತ್ರಿ ವೇಳೆ ಟಿಕ್ರಿ ಬ್ಲಾಕ್‌ನ ಸಮೋಲೆ ಗ್ರಾಮದಲ್ಲಿ ಮಣ್ಣಿನ ಮನೆ ಕುಸಿದಿದೆ. 3 ವರ್ಷ ಮತ್ತು 2 ತಿಂಗಳ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕುಸಿದ ಮನೆಯ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದರು. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಹಲವಾರು ಮನೆಗಳಿಗೂ ಹಾನಿಯಾಗಿದೆ ಎಂದು ಅವರು ಹೇಳಿದರು.ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.

ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ಸ್ಥಗಿತಗೊಂಡ ನಂತರ ವೈಷ್ಣೋದೇವಿ ಯಾತ್ರೆ ಪುನರಾರಂಭವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next