ಬೆಂಗಳೂರು/ಚೆನ್ನೈ: ಬಂಗಾಲ ಕೊಲ್ಲಿ ಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆ ಆಗಬಹುದು.
ನ. 14ರಂದು ಕರಾವಳಿಯ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಡ್ಯ, ಮೈಸೂರು ಸೇರಿದಂತೆ ಹಳೆ ಮೈಸೂರು ಭಾಗಗಳಲ್ಲಿ ಶುಕ್ರವಾರ ದಿನವಿಡೀ ತುಂತುರು ಮಳೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸಿದೆ. ಮೈಸೂರಿನಲ್ಲಿ ತುಂತುರು ಮಳೆ ಹಾಗೂ ಮಂಜು ಕವಿದ ವಾತಾವರಣವಿತ್ತು.
ಹಲವು ಜಿಲ್ಲೆಗಳಲ್ಲಿ ಶನಿವಾರದಿಂದ 2 ದಿನ ಮೋಡ ಕವಿದ ವಾತಾವರಣದ ಜತೆಗೆ ತುಂತುರು ಮಳೆಯಾಗಲಿದೆ. ಮಂಜಿ ನಿಂದ ಕೂಡಿದ್ದು.
Related Articles
ಚಳಿಯ ಪ್ರಮಾಣ ಹೆಚ್ಚಾಗಿರಲಿದೆ. ಇದು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಯಾಗುವ ಹಾಗೂ ಕರಾವಳಿಯ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯ ಜತೆಗೆ ಚಳಿಯೂ ಹೆಚ್ಚಾಗಿರುವ ಸಾಧ್ಯತೆಗಳಿವೆ.
ಶುಕ್ರವಾರ ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ದಾಖ ಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.