Advertisement

ಬೈಕ್‌ಗಳಿಗೆ ಢಿಕ್ಕಿ ಹೊಡೆದು ಕಮರಿಗೆ ಉರುಳಿದ ಟ್ಯಾಂಕರ್:‌ ಇಬ್ಬರು ಮೃತ್ಯು

08:56 AM May 09, 2023 | Team Udayavani |

ಮಹಾರಾಷ್ಟ್ರ: ಬೈಕ್‌ ಗಳಿಗೆ ಟ್ಯಾಂಕರ್‌ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ರಾತ್ರಿ( ಮೇ 8 ರಂದು) ನಡೆದಿದೆ.

Advertisement

ಕಚ್ಚಾ ಮದ್ಯವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಪುಣೆ ನಗರದ ಹಡಪ್ಸರ್ ಕೈಗಾರಿಕಾ ಪ್ರದೇಶಕ್ಕೆ ತೆರಳುತ್ತಿದ್ದಾಗ ಪುಣೆ-ಸಾಸ್ವಾದ್ ರಸ್ತೆಯ ಡೈವ್ ಘಾಟ್ ವಿಭಾಗದಲ್ಲಿ ರಾತ್ರಿ 8:30 ರ ಸುಮಾರಿಗೆ ಎರಡು ಬೈಕ್‌ ಗಳಿಗೆ ಢಿಕ್ಕಿ ಹೊಡೆದು 50-60 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಬ್ರೇಕ್‌ ಫೇಲ್‌ ಆದ ಪರಿಣಾಮ ಈ ಘಟನೆ ನಡೆದಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದಿದೆ. ಟ್ಯಾಂಕರ್‌ ಚಾಲಕ ಹಾಗೂ ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಟ್ಯಾಂಕರ್‌ ಬೆಂಕಿ ತಗುಲಬಾರದೆನ್ನುವ ನಿಟ್ಟಿನಲ್ಲಿ ಅಗ್ನಿಶಾಮಕ ದಳದವರು ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next