ಕ್ಯಾಲಿಫೋರ್ನಿಯ: ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ಕೌಂಟಿಯ ಗುರುದ್ವಾರದಲ್ಲಿ ಭಾನುವಾರ ಸ್ಥಳೀಯ ಸಮಯ ಮಧ್ಯಾಹ್ನ 2.30ರ ಸುಮಾರಿಗೆ ಇಬ್ಬರು ಪರಿಚಿತ ವ್ಯಕ್ತಿಗಳು ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆ.
Advertisement
ಪ್ರಸ್ತುತ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. ಇಬ್ಬರು ಸ್ನೇಹಿತರಾಗಿದ್ದು, ಯಾವ ಕಾರಣಕ್ಕೆ ಶೂಟ್ ಔಟ್ ನಡೆದಿದೆ ಎಂಬುದರ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.