ಮುಂಬಯಿ: ಮೇ 19 ರಂದು ನಡೆದ ಪೋರ್ಶೆ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಪುಣೆಯ ಇಬ್ಬರು ಪೊಲೀಸರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.
ಅಪಘಾತದ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡದ ಕಾರಣ ಯರವಾಡ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡ ಪೊಲೀಸ್ ಇನ್ಸ್‌ಪೆಕ್ಟರ್ ರಾಹುಲ್ ಜಗದಾಳೆ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ವಿಶ್ವನಾಥ ತೋಡ್ಕರಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.
ಮೇ 19 ರಂದು, ವೇಗವಾಗಿ ಬಂದ ಪೋರ್ಶೆ ಕಾರು ಎದುರಿನಿಂದ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದರು. ಪ್ರಕರಣ ದಾಖಲಿಸಿಕೊಳ್ಳುವಾಗ ಕೆಲ ಪೊಲೀಸರಿಂದ ಲೋಪ ಎಸಗಿರುವುದು ಆಂತರಿಕ ತನಿಖೆಯಿಂದ ತಿಳಿದು ಬಂದಿದ್ದು, ಸಾಕ್ಷ್ಯ ನಾಶಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಪಘಾತದ ಬಗ್ಗೆ ವ್ಯಾಪಕ ಆಕ್ರೋಶ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ನಡುವೆ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ತನ್ನ ಅಪ್ರಾಪ್ತ ಮಗನಿಗೆ ವಾಹನ ಚಲಾಯಿಸಲು ಮತ್ತು ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಅಪ್ರಾಪ್ತ ಬಾಲಕನ ತಂದೆಯನ್ನು ಸಹ ಬಂಧಿಸಲಾಗಿದ್ದು ತನಿಖೆ ಮುಂದುವರಿದಿದೆ.
ಇದನ್ನೂ ಓದಿ: Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್