ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಇಬ್ಬರು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ(ಡಿಸೆಂಬರ್ 28) ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ:‘ವಿಶ್ರಾಂತಿ ಪಡೆಯಿರಿ’ ಎಂಬ ಸ್ವಪಕ್ಷದ ಶಾಸಕರ ಸಲಹೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ
ಪಕ್ಷದ ಹಿರಿಯ ಮುಖಂಡ, ಸಂಸದ ಪ್ರತಾಪ್ ಬಾಜ್ವಾ ಅವರ ಸಹೋದರ ಕಾಂಗ್ರೆಸ್ ಶಾಸಕ ಫತೇಹ್ ಜಂಗ್ ಸಿಂಗ್ ಬಾಜ್ವಾ ಹಾಗೂ ಹರ್ ಗೋವಿಂದ್ ಪುರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಲ್ವಿಂದರ್ ಸಿಂಗ್ ಲಾಡ್ಡಿ ಭಾರತೀಯ ಜನತಾ ಪಕ್ಷದ ಜತೆ ಕೈಜೋಡಿಸಿರುವುದಾಗಿ ವರದಿ ಹೇಳಿದೆ.
ಇತ್ತೀಚೆಗಷ್ಟೇ ನಡೆದ ರಾಲಿಯಲ್ಲಿ ಪಂಜಾಬ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ನವಜ್ಯೋತ್ ಸಿಂಗ್ ಸಿಧು, ಫತೇಹ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದ್ದರು. ಈ ಸಂದರ್ಭದಲ್ಲಿ ತನಗೆ ಇದೇ ಕ್ಷೇತ್ರದಲ್ಲಿ ಟಿಕೆಟ್ ಕೊಡುವುದಾಗಿ ಹೈಕಮಾಂಡ್ ಸ್ಪಷ್ಟಪಡಿಸಲಿ ಎಂದು ತಿರುಗೇಟು ನೀಡಿದ್ದರು.
ಕಳೆದ ವಾರ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಶಾಸಕ ರಾಣಾ ಗುರ್ಮೀತ್ ಸೋಧಿ ಕೂಡಾ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಈ ಮೂವರು ಶಾಸಕರು ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಆಪ್ತರಾಗಿದ್ದರು ಎಂದು ವರದಿ ತಿಳಿಸಿದೆ.